ಹೊಸಪೇಟೆ: ಎಸ್‍ಎಸ್‍ಎಲ್‍ಸಿ ಫಲಿತಾಂಶ ಸುಧಾರಣೆಗೊಳ್ಳಲು ಅಗತ್ಯ ಕ್ರಮ ವಹಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಸೂಚನೆ

ಹೊಸಪೇಟೆ(ವಿಜಯನಗರ),: ವಿಧ್ಯಾರ್ಥಿಗಳ ಭವಿಷ್ಯದ ಆಯ್ಕೆಗೆ ಎಸ್‍ಎಸ್‍ಎಲ್‍ಸಿ ಫಲಿತಾಂಶ ಮಹತ್ತರವಾಗಿರುವುದರಿಂದ ಎಲ್ಲಾ ವಿಷಯಗಳಲ್ಲಿನ ಶಿಕ್ಷಕರು ಸಂಭಾವ್ಯ ಆಧಾರಿತ ಪ್ರಶ್ನೆ ಪತ್ರಿಕೆಗಳನ್ನು ತಾವೇ ತಯಾರಿಸಿ, ವಿದ್ಯಾರ್ಥಿಗಳಿಗೆ ಅಭ್ಯಾಸ ಮಾಡಿಸಿ, ಉತ್ತಮ ಫಲಿತಾಂಶ ಬರಲು ಅಗತ್ಯ ಕ್ರಮ ವಹಿಸುವಂತೆ…

SSLC Result Improvement Progress Review Meeting

ಹೊಸಪೇಟೆ(ವಿಜಯನಗರ),: ವಿಧ್ಯಾರ್ಥಿಗಳ ಭವಿಷ್ಯದ ಆಯ್ಕೆಗೆ ಎಸ್‍ಎಸ್‍ಎಲ್‍ಸಿ ಫಲಿತಾಂಶ ಮಹತ್ತರವಾಗಿರುವುದರಿಂದ ಎಲ್ಲಾ ವಿಷಯಗಳಲ್ಲಿನ ಶಿಕ್ಷಕರು ಸಂಭಾವ್ಯ ಆಧಾರಿತ ಪ್ರಶ್ನೆ ಪತ್ರಿಕೆಗಳನ್ನು ತಾವೇ ತಯಾರಿಸಿ, ವಿದ್ಯಾರ್ಥಿಗಳಿಗೆ ಅಭ್ಯಾಸ ಮಾಡಿಸಿ, ಉತ್ತಮ ಫಲಿತಾಂಶ ಬರಲು ಅಗತ್ಯ ಕ್ರಮ ವಹಿಸುವಂತೆ ಹೊಸಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಚೆನ್ನಬಸಪ್ಪ ಅವರು ಶಿಕ್ಷಕರುಗಳಿಗೆ ಸೂಚಿಸಿದರು.

ಹೊಸಪೇಟೆಯ ನರ್ಮದಾದೇವಿ ಸ್ಮಾರಕ ಪ್ರೌಢಶಾಲೆಯಲ್ಲಿ ಮಂಗಳವಾರದಂದು ಆಯೋಜಿಸಿದ್ದ ಎಸ್‍ಎಸ್‍ಎಲ್‍ಸಿ ಫಲಿತಾಂಶ ಸುಧಾರಣೆಗೆ ಕೈಗೊಂಡಿರುವ ಕ್ರಮಗಳ ಕುರಿತು ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಈಗಾಗಲೇ ಎಸ್‍ಎಸ್‍ಎಲ್‍ಸಿ ಫಲಿತಾಂಶ ಸುಧಾರಣೆ ಕ್ರಮ ವಹಿಸಲು ಸರ್ಕಾರಿ ಪ್ರೌಢಶಾಲೆಗಳ ಮುಖ್ಯಗುರುಗಳು ಹಾಗೂ ಸಹಶಿಕ್ಷಕರುಗಳನ್ನೊಳಗೊಂಡ ಉಸ್ತುವಾರಿ ತಂಡ ರಚನೆ ಮಾಡಲಾಗಿದ್ದು, ತಂಡದ ಸದಸ್ಯರುಗಳು ನೇಮಿಸಿದ ಶಾಲೆಗಳಿಗೆ ವಾರದಲ್ಲಿ ಒಂದು ದಿನ ಶಾಲೆಗೆ ಭೇಟಿನೀಡಿ ಪರಿಶೀಲಿಸಬೇಕು ಎಂದು ಮಾರ್ಗದರ್ಶನ ನೀಡಿದರು.

Vijayaprabha Mobile App free

ಎಲ್ಲಾ ವಿದ್ಯಾರ್ಥಿಗಳಿಗೆ ಹಿಂದಿನ ಸಾಲಿನ ಮಾದರಿ ಉತ್ತರ ಪತ್ರಿಕೆಗಳನ್ನು ಅಭ್ಯಾಸ ಮಾಡಿಸಲು ಕ್ರಮ ವಹಿಸಬೇಕು ಮತ್ತು ಬೆಳಿಗ್ಗೆ ಹಾಗೂ ಸಂಜೆ ಕಡ್ಡಾಯವಾಗಿ ಅಭ್ಯಾಸ ಮಾಡುವಂತೆ ಸೂಚಿಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಪ್ರೌಢಶಾಲಾ ಮುಖ್ಯಗುರುಗಳ ಸಂಘದ ಅಧ್ಯಕ್ಷರಾದ ಅಕ್ಕಮಹಾದೇವಿ ಸರಗಣಾಚಾರಿ ಸೇರಿದಂತೆ ಎಲ್ಲಾ ಸರ್ಕಾರಿ ಪ್ರೌಢಶಾಲಾ ಮುಖ್ಯಗುರುಗಳು ಹಾಜರಿದ್ದರು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.