ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಹಂಪಿಯಲ್ಲಿ ನಡೆದಿದೆ.
ಇಬ್ಬರು ಮಕ್ಕಳು & ದಂಪತಿಗಳು ಸೇರಿದಂತೆ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಇಬ್ಬರು ಮಕ್ಕಳಿಗೆ ವಿಷ ಕುಡಿಸಿ ಬಳಿಕ ದಂಪತಿಗಳು ತಾವು ವಿಷ ಸೇವಿಸಿದ್ದಾರೆ.
ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸೌಮ್ಯ ಪತಿ ಚಂದ್ರಯ್ಯ (42) ಸಾವನಪ್ಪಿದ್ದಾನೆ. ಹಂಪಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.