ದಾವಣಗೆರೆ: ರಾಜ್ಯ ಪೊಲೀಸ್ ಇಲಾಖೆಯಿಂದ ಖಾಲಿ ಇರುವ ಹುದ್ದೆಗಳಿಗೆ ಉಚಿತ ಪರೀಕ್ಷಾಪೂರ್ವ ತರಬೇತಿ

ದಾವಣಗೆರೆ ಸೆ.05 : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಖಾಲಿ ಇರುವ ಪೊಲೀಸ್ ಕಾನ್ಸ್‍ಟೇಬಲ್ ಮತ್ತು ಪೊಲೀಸ್ ಸಬ್‍ಇನ್‍ಸ್ಪೆಕ್ಟರ್ ಹುದ್ದೆಗಳಿಗೆ ಮುಂಬರುವ ದಿನಗಳಲ್ಲಿ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲಿರುವ ಪರೀಕ್ಷಾರ್ಥಿಗಳಿಗೆ ಮಾದರಿ ವೃತ್ತಿ ಕೇಂದ್ರ…

ದಾವಣಗೆರೆ ಸೆ.05 : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಖಾಲಿ ಇರುವ ಪೊಲೀಸ್ ಕಾನ್ಸ್‍ಟೇಬಲ್ ಮತ್ತು ಪೊಲೀಸ್ ಸಬ್‍ಇನ್‍ಸ್ಪೆಕ್ಟರ್ ಹುದ್ದೆಗಳಿಗೆ ಮುಂಬರುವ ದಿನಗಳಲ್ಲಿ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲಿರುವ ಪರೀಕ್ಷಾರ್ಥಿಗಳಿಗೆ ಮಾದರಿ ವೃತ್ತಿ ಕೇಂದ್ರ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ದಾವಣಗೆರೆ ವತಿಯಿಂದ ಸೆ.07 ರಿಂದ ಸೆ.17 ರವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51, 2ನೇ ಮಹಡಿ, ಬಿ ಬ್ಲಾಕ್, ಜಿಲ್ಲಾ ಆಡಳಿತ ಭವನ, ಕರೂರು ಇಂಡಸ್ಟ್ರಿಯಲ್ ಏರಿಯಾ, ಪಿ.ಬಿ. ರಸ್ತೆ, ದಾವಣಗೆರೆ ಇಲ್ಲಿ ಉಚಿತ ಪರೀಕ್ಷಾಪೂರ್ವ ತರಬೇತಿಯನ್ನು ಆಯೋಜಿಸಲಾಗಿದೆ.

ತರಬೇತಿಗೆ ಹಾಜರಾಗುವ ಅಭ್ಯರ್ಥಿಗಳು ಸೆ.06 ರಂದು ಸಂಜೆ 5 ಗಂಟೆಯ ಒಳಗೆ ಕಚೇರಿಯಲ್ಲಿ ನೋಂದಣಿ ಮಾಡಿಸಬೇಕು, ನೋಂದಾಯಿತ ಅಭ್ಯರ್ಥಿಗಳಿಗೆ ಮಾತ್ರ ಪ್ರವೇಶ ನೀಡಲಾಗುತ್ತದೆ. ಈ ತರಬೇತಿಯು ಸೆ.07 ರಂದು ಬೆಳಿಗ್ಗೆ 10 ಗಂಟೆಗೆ ತಮ್ಮ ಸ್ವಂತ ಖರ್ಚಿನಲ್ಲಿ (ಪ್ರಯಾಣ ಭತ್ಯೆ ಹಾಗೂ ಊಟದ ವ್ಯವಸ್ಥೆ ಇರುವುದಿಲ್ಲ) ತರಬೇತಿಗೆ ಹಾಜರಾಗಬೇಕು.

ಹೆಚ್ಚಿನ ಮಾಹಿತಿಗೆ ಹಾಗೂ ನೋಂದಣಿಗಾಗಿ ಕಚೇರಿ ದೂರವಾಣಿ ಸಂಖ್ಯೆ: 08192-259446 ಹಾಗೂ ಮೊಬೈಲ್ ಸಂಖ್ಯೆ:7406323294 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಉದ್ಯೋಗಾಧಿಕಾರಿ ಗಿರೀಶ ಕೆ.ಎನ್ ಪ್ರಟಕಣೆಯಲ್ಲಿ ತಿಳಿಸಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.