ದಾವಣಗೆರೆ: ಸೆ.21 ರಿಂದ ತುರ್ತು ಸೇವೆಯನ್ನು ಹೊರತುಪಡಿಸಿ ಉಳಿದೆಲ್ಲ ಆರೋಗ್ಯ ಸೇವೆಗಳು ಸ್ಥಗಿತ!

ದಾವಣಗೆರೆ ಸೆ.14 : ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಜಿಲ್ಲಾ ಶಾಖೆ ವತಿಯಿಂದ ಸರ್ಕಾರಿ ವೈದ್ಯಾಧಿಕಾರಿಗಳ ನ್ಯಾಯುತವಾದ ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ಸೆ.21 ರಿಂದ ತುರ್ತು ಸೇವೆಯನ್ನು ಹೊರತುಪಡಿಸಿ ಉಳಿದೆಲ್ಲ ಆರೋಗ್ಯ ಸೇವೆಗಳನ್ನು…

ದಾವಣಗೆರೆ ಸೆ.14 : ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಜಿಲ್ಲಾ ಶಾಖೆ ವತಿಯಿಂದ ಸರ್ಕಾರಿ ವೈದ್ಯಾಧಿಕಾರಿಗಳ ನ್ಯಾಯುತವಾದ ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ಸೆ.21 ರಿಂದ ತುರ್ತು ಸೇವೆಯನ್ನು ಹೊರತುಪಡಿಸಿ ಉಳಿದೆಲ್ಲ ಆರೋಗ್ಯ ಸೇವೆಗಳನ್ನು ಸ್ಥಗಿತಗೊಳಿಸುತ್ತೇವೆ ಎಂದು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರಿಗೆ ಮನವಿ ಸಲ್ಲಿಸಲಾಯಿತು.

ಜುಲೈ 22 ರಂದು ಹಲವು ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಕರ್ನಾಟಕ ರಾಜ್ಯ ವೈದ್ಯಾಧಿಕಾರಿಗಳ ಸಂಘವು ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಿದ್ದು, ಆಗಸ್ಟ್ 15 ರೊಳಗೆ ನ್ಯಾಯಯುತ ಬೇಡಿಕೆಗಳು ಈಡೇರದ ಪಕ್ಷದಲ್ಲಿ ಹಂತ ಹಂತವಾಗಿ ಮುಷ್ಕರದ ಮೊರೆ ಹೋಗುವುದಾಗಿ ಸರ್ಕಾರದ ಗಮನಕ್ಕೆ ತರಲಾಗಿತ್ತು.

ಆದರೆ ಇದುವರೆಗೂ ನಮ್ಮ ಬೇಡಿಕೆಗಳು ಹಿನ್ನಲೆ ಸೆ.14 ರಿಂದ ಇಲಾಖೆಯ ಕಾರ್ಯಕ್ರಮ ಅನುಷ್ಟಾನದ ಬಗ್ಗೆ ಸರ್ಕಾರಕ್ಕೆ ನೀಡುತ್ತಿರುವ ವರದಿಗಳನ್ನು ಸ್ಥಗಿತಗೊಳಿಸಿ ಆರೋಗ್ಯ ಸೇವೆಗಳನ್ನು ನೀಡುವುದು ಹಾಗೂ ಸೆ.21 ರಿಂದ ತುರ್ತು ಸೇವೆಯನ್ನು ಹೊರತುಪಡಿಸಿ ಉಳಿದೆಲ್ಲ ಆರೋಗ್ಯ ಸೇವೆಗಳನ್ನು ಸ್ಥಗಿತಗೊಳಿಸುತ್ತೇವೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ ಡಾ.ಎಲ್.ನಾಗರಾಜ್ ಮನವಿಯಲ್ಲಿ ತಿಳಿಸಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.