ದಾವಣಗೆರೆ ಸೆ.05 : 2022-23ನೇ ಸಾಲಿನಲ್ಲಿ ಯಾವುದೇ ಕ್ಷೇತ್ರದಲ್ಲಿ ನಾವೀನ್ಯತೆ, ತಾರ್ಕಿಕಸಾಧನೆಗಳು, ಕ್ರೀಡೆ, ಕಲೆ, ಸಂಸ್ಕøತಿ, ಸಂಗೀತ ಸೇರಿದಂತೆ ಒಟ್ಟು 04 ಕ್ಷೇತ್ರ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಈ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆಯನ್ನು ಮಾಡಿರುವ 05-18 ವರ್ಷದೊಳಗಿನ ಮಕ್ಕಳನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗುವುದು. 01 ಡಿಸೆಂಬರ್ 2004 ಹಾಗೂ ನಂತರ ಹುಟ್ಟಿದ ಮಕ್ಕಳು ಅರ್ಜಿ ಸಲ್ಲಿಕೆಗೆ ಅರ್ಹರಿರುತ್ತಾರೆ. ಪ್ರತಿ ಕ್ಷೇತ್ರಕ್ಕೆ ಇಬ್ಬರು ಮಕ್ಕಳಂತೆ ಒಟ್ಟು 08 ಮಕ್ಕಳಿಗೆ ರೂ.10,000/- ನಗದು ಹಾಗೂ ಪ್ರಶಸ್ತಿ ಪತ್ರವನ್ನು ನೀಡಲಾಗುವುದು.
ಈ ಪ್ರಶಸ್ತಿಗೆ ಆಯ್ಕೆ ಆಗುವಂತಹವರು ನಾವೀನ್ಯತೆ, ತಾರ್ಕಿಕ ಸಾಧನೆಗಳು, ಕ್ರೀಡೆ, ಕಲೆ, ಸಂಸ್ಕøತಿ, ಸಂಗೀತ ಕ್ಷೇತ್ರಗಳಲ್ಲಿ ಅಪ್ರತಿಮ ಪ್ರತಿಭೆ ಉಳ್ಳವರಾಗಿದ್ದು, ಅವರು ಸಾಧಿಸಿದ ಪ್ರತಿಭೆಯ ಬಗ್ಗೆ ವೃತ್ತ ಪತ್ರಿಕೆಗಳಲ್ಲಿ ವರದಿಯಾಗಿರಬೇಕು ಅಥವಾ ಸಂಬಂಧಪಟ್ಟ ಕ್ಷೇತ್ರದ ತಜ್ಞರಿಂದ ಪ್ರಮಾಣೀಕರಿಸಿರಬೇಕು. ಮಕ್ಕಳ ವಯಸ್ಸಿನ ಪ್ರಮಾಣ ಪತ್ರವನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಿಸಿ ಸಲ್ಲಿಸಬೇಕು.
ಜಿಲ್ಲಾ ಮಟ್ಟದಲ್ಲಿ ರಚಿಸಲ್ಪಟ್ಟಿರುವ ಸಮಿತಿಯು ಅತ್ಯುತ್ತಮ ಸಾಧನೆಯನ್ನು ಮಾಡಿರುವಂತಹ ಮಕ್ಕಳ ಹೆಸರನ್ನು ಆಯ್ಕೆ ಮಾಡಿ ಶಿಪಾರಸ್ಸು ಮಾಡುತ್ತದೆ. ಆಯ್ಕೆ ಆದ ಮಕ್ಕಳಿಗೆ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುವುದು. ಅರ್ಜಿ ಸಲ್ಲಿಸಲು ಸೆ.30 ಕೊನೆಯ ದಿನವಾಗಿರುತ್ತದೆ.
ಅರ್ಜಿಯನ್ನು ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಿಂದ ಪಡೆದು, ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಛೇರಿ, ಸರ್ಕಾರಿ ಬಾಲಕರ ಬಾಲ ಮಂದಿರ ಆವರಣ, ಎಂ.ಸಿ.ಸಿ. ‘ಬಿ’ ಬ್ಲಾಕ್, ಕುವೆಂಪು ನಗರ, ದಾವಣಗೆರೆ. ದೂ.ಸ: 08192-264056 ನ್ನು ಸಂಪರ್ಕಿಸಬಹುದೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.