Jail Visit: ಕಾರಾಗೃಹ ವಾಸಿಗಳಿಗೆ ಸೊಳ್ಳೆ ಕಡಿತ ತಪ್ಪಿಸಲು ಕ್ರಮಕ್ಕೆ  ಎಸ್.ಕೆ. ವಂತಿಕೋಡಿ ಸೂಚನೆ

ಕಾರವಾರ: ಕಾರವಾರ ಜಿಲ್ಲಾ ಕಾರಾಗೃಹದ ನಿವಾಸಿಗಳಿಗೆ ಸೊಳ್ಳೆ ಕಡಿತವಾಗದಂತೆ ತಡೆಯಲು ಜೈಲಿನ ಕಿಟಕಿಗಳಿಗೆ ಸೊಳ್ಳೆಗಳು ಬಾರದಂತೆ ಮೆಶ್ ಹಾಕಿಸಿ ಹಾಗೂ ಗೋಡೆಗಳಿಗೆ ಹೊಸದಾಗಿ ಪೇಂಟ್ ಮಾಡಿಸುವಂತೆ ಕಾರಾಗೃಹ ಇಲಾಖೆಯ ಅಧಿಕಾರಿಗಳಿಗೆ ರಾಜ್ಯ ಮಾನವ ಹಕ್ಕು…

ಕಾರವಾರ: ಕಾರವಾರ ಜಿಲ್ಲಾ ಕಾರಾಗೃಹದ ನಿವಾಸಿಗಳಿಗೆ ಸೊಳ್ಳೆ ಕಡಿತವಾಗದಂತೆ ತಡೆಯಲು ಜೈಲಿನ ಕಿಟಕಿಗಳಿಗೆ ಸೊಳ್ಳೆಗಳು ಬಾರದಂತೆ ಮೆಶ್ ಹಾಕಿಸಿ ಹಾಗೂ ಗೋಡೆಗಳಿಗೆ ಹೊಸದಾಗಿ ಪೇಂಟ್ ಮಾಡಿಸುವಂತೆ ಕಾರಾಗೃಹ ಇಲಾಖೆಯ ಅಧಿಕಾರಿಗಳಿಗೆ ರಾಜ್ಯ ಮಾನವ ಹಕ್ಕು ಆಯೋಗದ ನ್ಯಾಯಾಂಗ ಸದಸ್ಯರಾದ ಎಸ್.ಕೆ. ವಂತಿಕೋಡಿ ಸೂಚನೆ ನೀಡಿದರು.

ಅವರು ಸೋಮವಾರ ಕಾರವಾರದ ಜಿಲ್ಲಾ ಕಾರಾಗೃಹಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಾರಾಗೃಹವಾಸಿಗಳು ಜೈಲಿನಲ್ಲಿ ಸೊಳ್ಳೆಯ ಸಮಸ್ಯೆಯ ಬಗ್ಗೆ ತಿಳಿಸಿದರು. ಈ ಕುರಿತಂತೆ ಜೈಲು ಕೊಠಡಿಯ ಕಿಟಕಿಗಳಿಗೆ ಸೊಳ್ಳೆಗಳು ಬಾರದಂತೆ ಮೆಶ್ ಅಳವಡಿಸುವಂತೆ ಸೂಚಿಸಿದ ಅವರು ಜೈಲಿನ ಗೋಡೆಗಳಿಗೆ ಪೇಂಟ್ ಮಾಡಿ ಹಲವು ವರ್ಷಗಳು ಕಳೆದಿರುವುದನ್ನು ಕಂಡು ಉತ್ತಮ ಗುಣಮಟ್ಟದ ಪೇಂಟ್ ಮಾಡಿಸುವಂತೆ ಹಾಗೂ ಕಾರಾಗೃಹದ ಸುತ್ತಮುತ್ತ ಸ್ವಚ್ಛತೆಗೆ ಆದ್ಯತೆ ನೀಡುವಂತೆ ಮತ್ತು ವೈದ್ಯರಿಂದ ನಿಯಮಿತವಾಗಿ ಆರೋಗ್ಯ ತಪಾಸಣೆ ನಡೆಸುವಂತೆ ಸೂಚಿಸಿದರು.

 ಕಾರಾಗೃಹದ ಅಡುಗೆ ಮನೆಗೆ ಭೇಟಿ ನೀಡಿ, ಸ್ವತಃ ಆಹಾರ ಸೇವಿಸಿ, ಯಾವುದೇ ಕಾರಣಕ್ಕೂ ಆಹಾರದ ಗುಣಮಟ್ಟದಲ್ಲಿ ಕೊರತೆ ಕಂಡುಬಾರದಂತೆ ಎಚ್ಚರಿಕೆ ವಹಿಸುವಂತೆ ಹಾಗೂ ತಾಜಾ ಮತ್ತು ಗುಣಮಟ್ಟದ ಕಾಳುಗಳು ಮತ್ತು ತರಕಾರಿಗಳನ್ನು ಬಳಕೆ ಮಾಡುವಂತೆ ಹಾಗೂ ಕೊಠಡಿಗಳು ಮತ್ತು ಶೌಚಾಲಯಗಳಲ್ಲಿ ಪ್ರತಿನಿತ್ಯ ಸ್ವಚ್ಛತೆ ಕಾಪಾಡುವಂತೆ ನಿರ್ದೇಶನ ನೀಡಿದರು.

Vijayaprabha Mobile App free

ಕಾರಾಗೃಹವಾಸಿಗಳೊಂದಿಗೆ ಮಾತನಾಡಿದ ಅವರು ಜೈಲಿನಲ್ಲಿ ಏನಾದರೂ ಸಮಸ್ಯೆಗಳಿವೆಯೇ, ಊಟ ಸರಿಯಿದೆಯೇ, ಮೂಲಭೂತ ಸೌಲಭ್ಯಗಳು ಸರಿಯಿವೆಯೇ, ಎಲ್ಲರನ್ನೂ ವಿಚಾರಣೆಗೆ ಕೋರ್ಟ್ ಗೆ ಹಾಜರು ಪಡಿಸುತ್ತಿದ್ದಾರೆಯೇ, ವಿಸಿ ಮೂಲಕ ವಿಚಾರಣೆ ನಡೆಯುತ್ತಿದೆಯೇ, ವಕೀಲರ ನೇಮಕ ಆಗಿದೆಯೇ ಎಂದು ವಿಚಾರಿಸಿದರು. ಈ ಕುರಿತಂತೆ ಯಾವುದೇ ಸಮಸ್ಯೆ ಇಲ್ಲವೆಂದು ಕಾರಾಗೃಹವಾಸಿಗಳು ತಿಳಿಸಿದರು. ಜೈಲಿನಲ್ಲಿ ಅಳವಡಿಸಿರುವ ಸಿಸಿಟಿವಿಗಳನ್ನು ಪರಿಶೀಲನೆ ನಡೆಸಿದರು.

 ಬೆಳಗಾವಿ ಕಾರಾಗೃಹದ ಸಹಾಯಕ ಅಧೀಕ್ಷಕ ಕೃಷ್ಣಮೂರ್ತಿ, ಕಾರವಾರ ಕಾರಾಗೃಹದ ಪ್ರಭಾರ ಅಧೀಕ್ಷಕ ಫಕೀರಪ್ಪ ತಮ್ಮಣ್ಣ ದಾಂಡೇನವರ್, ನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ರಮೇಶ್ ಹೂಗಾರ್ ಉಪಸ್ಥಿತರಿದ್ದರು. ನಂತರ ಕಾರವಾರ ನಗರ ಪೊಲೀಸ್ ಠಾಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.