ದಾವಣಗೆರೆ: ದಾವಣಗೆರೆಯ ಕಬ್ಬೂರು ಬಸಪ್ಪ ನಗರದಲ್ಲಿ ವ್ಯಕ್ತಿಯೊಬ್ಬರನ್ನು ಕಟ್ಟಿಗೆಯಿಂದ ತಲೆಗೆ ಹೊಡೆದು ಭೀಕರವಾಗಿ ಕೊಲೆ ಮಾಡಲಾದ ಘಟನೆ ನಡೆದಿದೆ.
ಹೌದು, ಪ್ರಶಾಂತ (29) ಕೊಲೆಯಾದ ವಯ್ಕ್ತಿಯಾಗಿದ್ದು, ಕಟ್ಟಿಗೆಯಿಂದ ತಲೆಗೆ ಹೊಡೆದಿದ್ದರಿಂದ ತಲೆಗೆ ತೀವ್ರ ಪೆಟ್ಟಾಗಿ ಸ್ಥಳದಲ್ಲಿಯೇ ಪ್ರಶಾಂತ ಮೃತಪಟ್ಟಿದ್ದು, ಕಬ್ಬೂರು ಬಸಪ್ಪ ನಗರದ ಎಲವಟ್ಟಿ ರೈಸ್ ಮಿಲ್ ಬಳಿ ಪ್ರಶಾಂತ್ ಶವ ಪತ್ತೆಯಾಗಿದೆ.
ಇನ್ನು, ವೈಷಮ್ಯದ ಕಾರಣದಿಂದ ಪ್ರಶಾಂತ್ ಕೊಲೆ ನಡೆದಿರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದ್ದು, ಘಟನಾ ಸ್ಥಳಕ್ಕೆ ನಗರ ಡಿವೈಎಸ್ಪಿ ಮಲ್ಲೇಶ್ ದೊಡ್ಡಮನಿ ಭೇಟಿ ಪರಿಶೀಲನೆ ನಡೆಸಿದ್ದು, ಆರ್ ಎಂ ಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.