ಹೂವಿನಹಡಗಲಿ: ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಹೊಳಲು-ಹಿರೇಹಡಗಲಿ ಮುಖ್ಯ ರಸ್ತೆಯ ಗರಡಿ ದುರುಗಮ್ಮ ದೇವಸ್ಥಾನದ ಬಳಿ 2015ರಲ್ಲಿ ಸಂಭವಿಸಿದ್ದ ಅಪಘಾತದಲ್ಲಿ ಆರೋಪಿಯಾಗಿದ್ದ ಟ್ಯಾಂಕರ್ ಚಾಲಕ ಎಸ್.ಜಿ.ನಾಗರಾಜ ಎನ್ನುವವರಿಗೆ ಜೆಎಂಎಫ್‌ಸಿ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ.
ಹೌದು, ಹಿರೇಹಡಗಲಿಯ ನಾಲಗಾರ್ ರಂಜಾನ್ ಸಾಬ್, ಮಗನೊಂದಿಗೆ ಬೈಕ್‌ನಲ್ಲಿ ಹೋಗುತ್ತಿರುವಾಗ ಹಿಂಬದಿಯಿಂದ ಟ್ಯಾಂಕರ್ ಡಿಕ್ಕಿ ಹೊಡೆದಿತ್ತು. ಪರಿಣಾಮ ರಂಜಾನ್ ಸಾಬ್ ಮೃತಪಟ್ಟಿದ್ದರು. ಹಿರೇಹಡಗಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ವಿಚಾರಣೆ ನಡೆಸಿದ ಜೆಎಂಎಫ್‌ಸಿ ನ್ಯಾಯಾಲಯ ಆರೋಪಿಗೆ ಜೈಲು ಶಿಕ್ಷೆ ವಿಧಿಸಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.