ದಾವಣಗೆರೆ: ಮೈಸೂರಿನಲ್ಲಿ ಕನ್ನಡ ಪುಸ್ತಕಗಳ ಮಾರಾಟ ಮೇಳ; ಮಳಿಗೆ ಕಾಯ್ದಿರಿಸಿಕೊಳ್ಳಲು ಸೂಚನೆ

ದಾವಣಗೆರೆ ಫೆ.25: ಕನ್ನಡ ಪುಸ್ತಕ ಪ್ರಾಧಿಕಾರವು ಮಾರ್ಚ್ 10 ರಿಂದ 15 ರವರೆಗೆ ಆರು ದಿನಗಳ ಕಾಲ “ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ ಮೇಳ-2022” ವನ್ನು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಏರ್ಪಡಿಸಲು ಉದ್ದೇಶಿಸಿದ್ದು,…

book fair vijayaprabha news

ದಾವಣಗೆರೆ ಫೆ.25: ಕನ್ನಡ ಪುಸ್ತಕ ಪ್ರಾಧಿಕಾರವು ಮಾರ್ಚ್ 10 ರಿಂದ 15 ರವರೆಗೆ ಆರು ದಿನಗಳ ಕಾಲ “ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ ಮೇಳ-2022” ವನ್ನು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಏರ್ಪಡಿಸಲು ಉದ್ದೇಶಿಸಿದ್ದು, ಪುಸ್ತಕ ಮೇಳದಲ್ಲಿ ಭಾಗವಹಿಸಲು ಆಸಕ್ತಿ ಇರುವ ರಾಜ್ಯದ ಎಲ್ಲಾ ಕನ್ನಡ ಪುಸ್ತಕ ಪ್ರಕಾಶಕರು / ಮಾರಾಟಗಾರರು ಅರ್ಜಿ ಸಲ್ಲಿಸಿ ಮಾರಾಟ ಮಳಿಗೆಯನ್ನು ಕಾಯ್ದಿರಿಸಿಕೊಳ್ಳಬಹುದಾಗಿದೆ. ಅರ್ಜಿ ಸಲ್ಲಿಸಲು ಮಾರ್ಚ್ 08 ರಂದು ಸಂಜೆ 05 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ.

ನಿಗದಿತ ಅರ್ಜಿ ನಮೂನೆಯನ್ನು ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರಿನ ಕಛೇರಿ ಅಥವಾ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ದಾವಣಗೆರೆ ಕಛೇರಿಯಲ್ಲಿ ಅಥವಾ ಪ್ರಾಧಿಕಾರದ ವೆಬ್‍ಸೈಟ್ www.kannadapustakapradhikara.com ನಲ್ಲಿ ಪಡೆಯಬಹುದು.

ಹೆಚ್ಚಿನ ಮಾಹಿತಿಗೆ ಕನ್ನಡ ಪುಸ್ತಕ ಪ್ರಾಧಿಕಾರದ ವೆಬ್‍ಸೈಟ್ ಅಥವಾ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು 560002 ಅಥವಾ ದೂರವಾಣಿ ಸಂಖ್ಯೆ 080-22484516/22107704 ಅನ್ನು ಸಂಪರ್ಕಿಸಬಹುದು ಎಂದು ಪ್ರಾಧಿಕಾರದ ಆಡಳಿತಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.