ದಾವಣಗೆರೆ: ಜಿಲ್ಲೆಯಲ್ಲಿ ಆ.17 ರಿಂದ ಆ.26 ರವರೆಗೆ ನಡೆಯುತ್ತಿರುವ ಕರ್ನಾಟಕ ಮುಕ್ತ ಶಾಲೆ-ಓ.ಎಸ್. ಪರೀಕ್ಷೆಗಳು ರಾಜನಹಳ್ಳಿ ಸೀತಮ್ಮ ಬಾಲಕೀಯರ ಪದವಿ ಪೂರ್ವ ಕಾಲೇಜ್, ದಾವಣಗರೆ ಕೇಂದ್ರದಲ್ಲಿ ನಡೆಯಲಿರುವುದರಿಂದ ಈ ಪರೀಕ್ಷೆಗಳು ಪಾರದರ್ಶಕವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಯಲು ಹಾಗೂ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಪರೀಕ್ಷೆಗಳನ್ನು ಶಾಂತವಾತವರಣದಲ್ಲಿ ನಡೆಸಲು ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿಯೊಳಗೆ ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ಮುಕ್ತ ಶಾಲೆ-ಪಿಎಸ್ ಪರೀಕ್ಷೆಗಳು ನಡೆಯಲಿರುವ ದಿನಗಳಂದು ಮತ್ತು ಸಮಯದಂದು ಮಾತ್ರ ರಾಜನಹಳ್ಳಿ ಸೀತಮ್ಮ ಬಾಲಕೀಯರ ಪದವಿ ಪೂರ್ವ ಕಾಲೇಜು ಪರೀಕ್ಷೆ ಕೇಂದ್ರದ 200 ಮೀಟರ್ ವ್ಯಾಪ್ತಿ ಪ್ರದೇಶದ ಸುತ್ತಲಿನ ಪ್ರದೇಶವನ್ನು ಸಾರ್ವಜನಿಕ ಪ್ರದೇಶಕ್ಕೆ ನಿಷೇಧಿತ ಪ್ರದೇಶವೆಂದು ಘೋಷಿಸಿ ಆದೇಶಿಸಿರುತ್ತೇನೆ. ಈ ಆದೇಶವು ಪರೀಕ್ಷಾರ್ಥಿಗಳಿಗೆ ಹಾಗೂ ಸದರಿ ಪರೀಕ್ಷೆಯ ಕರ್ತವ್ಯ ನಿರ್ವಹಿಸಲು ನೇಮಕಾತಿ ಆದ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಅನ್ವಯಿಸುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.