ದಾವಣಗೆರೆ ಫೆ.14 : ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ 2021-22ನೇ ಸಾಲಿನ ಕನ್ನಡ ಪ್ರವೇಶ ಕಾವ, ಜಾಣ, ರತ್ನ ಪರೀಕ್ಷೆಗಳನ್ನು ಕೋವಿಡ್ 19ರ ಮಾರ್ಗಸೂಚಿಯಂತೆ ಫೆ.18, 19 ಮತ್ತು 20 ರಂದು 3 ದಿನಗಳ ಕಾಲ ರಾಜ್ಯದ 19 ಕೇಂದ್ರಗಳಲ್ಲಿ ನಡೆಯಲಿದೆ.
ಕೋವಿಡ್-19 ಕಾರಣದಿಂದಾಗಿ ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ಇದೀಗ ಪ್ರಸಕ್ತ ಸಾಲಿನ ಸಾಹಿತ್ಯ ಪರೀಕ್ಷೆಗಳನ್ನು ಫೆ.18,19 ಮತ್ತು 20 ರಂದು ಒಟ್ಟು 3 ದಿನಗಳ ಕಾಲ ರಾಜ್ಯದ 19 ಕೇಂದ್ರಗಳಲ್ಲಿ ನಡೆಸಲು ತೀರ್ಮಾನಿಸಲಾಗಿದ್ದು, ಸಂಬಂಧಪಟ್ಟ ವಿದ್ಯಾರ್ಥಿಗಳಿಗೆ ಬದಲಾದ ಪರೀಕ್ಷೆ ವೇಳಾಪಟ್ಟಿಯನ್ನು ಅಂಚೆ ಮೂಲಕ ಕಳುಹಿಸಲಾಗಿದೆ.
ಹೆಚ್ಚಿನ ಮಾಹಿತಿಗೆ ವಿದ್ಯಾರ್ಥಿಗಳು ಗೌರವ ಕಾರ್ಯದರ್ಶಿ, ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಬೆಂಗಳೂರು-18 ಇವರನ್ನು ಅಥವಾ ಸಹಾಯವಾಣಿ ಸಂಖ್ಯೆ 080 26623584, 26612991 ಹಾಗೂ ವೆಬ್‍ಸೈಟ್ ವಿಳಾಸ www.kasapa.in ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.