ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಕೊಡಿಚೆರುವು ಗ್ರಾಮದ ಹೊರವಲಯದಲ್ಲಿರುವ ಕೃಷಿ ಹೊಂಡದಲ್ಲಿ ಗೃಹಿಣಿಯೋರ್ವರ ಶವ ಪತ್ತೆಯಾಗಿದೆ. ಕೊಡಿಚೆರುವು ಗ್ರಾಮದ ವರಲಕ್ಷ್ಮಿ(35) ಮೃತ ದುರ್ದೈವಿ ಮಳೆಯಾಗಿದ್ದಾಳೆ.
ಗ್ರಾಮದ ಹೊರವಲಯದಲ್ಲಿದ್ದ ಕೃಷಿ ಹೊಂಡದಲ್ಲಿ ಮಹಿಳೆಯ ಶವ ತೇಲುತ್ತಿರುವುದನ್ನು ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಕೃಷಿಹೊಂಡದ ಮೇಲೆ ಮಹಿಳೆ ಚಪ್ಪಲಿ ಇದ್ದು ಹೊಂಡಕ್ಕೆ ಯಾವುದೋ ಕಾರಣಕ್ಕೆ ಇಳಿದಾದ ಕಾಲು ಜಾರಿ ಬಿದ್ದಿರಬಹುದು, ಇಲ್ಲವೇ ಕೌಟುಂಬಿಕ ಕಲಹದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನುವ ಶಂಕೆ ವ್ಯಕ್ತವಾಗಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಹೊಂಡದಿಂದ ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment