ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟದ (ಎಎಸ್ಆರ್ಟಿಯು) 2023-24ನೇ ಸಾಲಿಗೆ ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಕ್ರಮವಾಗಿ ಮೂರು ರಾಷ್ಟ್ರೀಯ ಪ್ರಶಸ್ತಿಗಳು ಮತ್ತು ಒಂದು ರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದುಕೊಂಡಿವೆ.
ಕೆಎಸ್ಆರ್ಟಿಸಿ ತನ್ನ ಅಶ್ವಮೇಧ ಬ್ರ್ಯಾಂಡಿಂಗ್, ಇಮೇಜ್ ಡೆವಲಪ್ಮೆಂಟ್, ಕಾರ್ಮಿಕರ ಕಲ್ಯಾಣಕ್ಕಾಗಿ ನವೀನ ಯೋಜನೆಗಳು ಮತ್ತು ಗಣಕೀಕರಣಕ್ಕಾಗಿ ಮೂರು ಪ್ರಶಸ್ತಿಗಳನ್ನು ಗೆದ್ದಿದೆ.
ಮೆಟ್ರೋ ಫೀಡರ್ ಕ್ಯೂಆರ್ ಕೋಡ್ ಮೂಲಕ ಡಿಜಿಟಲ್ ಪ್ರಯೋಗಕ್ಕಾಗಿ ಬಿಎಂಟಿಸಿಗೆ ಪ್ರಶಸ್ತಿ ನೀಡಲಾಗಿದೆ. ನಿವೃತ್ತ ಐಪಿಎಸ್ ಅಧಿಕಾರಿ ಕಿರಣ್ ಬೇಡಿ ನವದೆಹಲಿಯಲ್ಲಿ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.