ಮಂಡ್ಯ: ಕೆ.ಎಸ್.ಆರ್.ಟಿ.ಸಿ ಬಸ್ ಚಲಾಯಿಸುತ್ತಿದ್ದ ವೇಳೆ ಚಾಲಕ ಏಕಾಏಕಿ ಮೂರ್ಛೆ ಹೋಗಿದ್ದು, ಬಸ್ ಸರಣಿ ಅಪಘಾತಕ್ಕೀಡಾದ ಘಟನೆ ಮಂಡ್ಯ ಜಿಲ್ಲೆಯ ಮಡಕಶಿರದ ಮಾರುತಿ ನಗರದಲ್ಲಿ ನಡೆದಿದೆ.
ಬಸ್ ಪಾವಗಡದಿಂದ ಬೆಂಗಳೂರಿಗೆ ತೆರಳುತ್ತಿತ್ತು. ಈ ವೇಳೆ ಬಸ್ ಚಾಲಕ ಇದ್ದಕ್ಕಿದ್ದಂತೆ ಮೂರ್ಛೆ ಹೋಗಿದ್ದು, ನಿಯಂತ್ರಣ ತಪ್ಪಿದ ಬಸ್, ಗೂಡ್ಸ್ ಹಾಗೂ ಆಟೋಗೆ ಡಿಕ್ಕಿ ಹೊಡೆದಿದೆ. ಬಳಿಕ ರಸ್ತೆ ಬದಿ ಹೋಗುತ್ತಿದ್ದ ರೈತರೊಬ್ಬರಿಗೆ ಗುದ್ದಿದೆ.
ಕೂದಲೆಳೆ ಅಂತರದಲ್ಲಿ ಬಸ್ ನಲ್ಲಿದ್ದ 40ಕ್ಕೂ ಹೆಚ್ಚು ಪ್ರಯಾಣಿಕರು ಪಾರಾಗಿದ್ದಾರೆ. ರೈತ ನಾರಾಯಣ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ಚಾಲಕ ಸಹ ಸದ್ಯ ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.




