ಕುಮಟಾ: ಮಹಾರಾಷ್ಟ್ರದಿಂದ ಕೇರಳದತ್ತ ಹೊರಟಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದ ಕಂದಕಕ್ಕೆ ಉರುಳಿಬಿದ್ದ ಘಟನೆ ಕುಮಟಾ ಪಟ್ಟಣದ ರಾಷ್ಟ್ರೀಯ ಹೆದ್ದಾರಿ 66ರ ಮಣಕಿ ಮೈದಾನದ ಬಳಿ ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಮೂವರೂ ಸಹ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕೇರಳ ಮೂಲದ ಮೂವರು ಮಹಾರಾಷ್ಟ್ರದಲ್ಲಿ ವಾಸವಿದ್ದು, ಬೆಳಿಗ್ಗೆ ಕೇರಳಕ್ಕೆ ಹೊರಟಿದ್ದರು. ಈ ವೇಳೆ ಹೆದ್ದಾರಿಯಲ್ಲಿ ಏಕಾಏಕಿ ಜಾನುವಾರು ಎದುರಾಗಿದ್ದು ಅದನ್ನು ತಪ್ಪಿಸಲು ಹೋಗಿ ಕಾರು ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಸುಮಾರು 30 ಅಡಿ ತಗ್ಗಿಗೆ ಇಳಿದಿದೆ.
ಅದೃಷ್ಟವಶಾತ್ ಕಾರಿನಲ್ಲಿದ್ದ ಮೂವರೂ ಸಹ ಪ್ರಾಣಾಪಾಯದಿಂದ ಪಾರಾಗಿದ್ದು, ಸ್ಥಳೀಯರ ಸಹಾಯದಿಂದ ಕಾರಿನಲ್ಲಿದ್ದವರನ್ನು ರಕ್ಷಣೆ ಮಾಡಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.