Udyog Khatari Abhiyaan: ಉದ್ಯೋಗ ಖಾತರಿ ನಡಿಗೆ ಸಬಲತೆಯಡೆಗೆ ಅಭಿಯಾನ

ಕುಮಟಾ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ 2025- 26ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಕೆಗಾಗಿ ಕುಮಟಾ ತಾಲ್ಲೂಕಿನ ಹೆಗಡೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಶುಕ್ರವಾರ ಉದ್ಯೋಗ ಖಾತರಿ ನಡಿಗೆ ಸಬಲತೆಯಡೆಗೆ…

ಕುಮಟಾ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ 2025- 26ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಕೆಗಾಗಿ ಕುಮಟಾ ತಾಲ್ಲೂಕಿನ ಹೆಗಡೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಶುಕ್ರವಾರ ಉದ್ಯೋಗ ಖಾತರಿ ನಡಿಗೆ ಸಬಲತೆಯಡೆಗೆ ಅಭಿಯಾನ ಹಮ್ಮಿಕೊಳ್ಳಲಾಯಿತು. 

ಜಿಲ್ಲಾ ಪಂಚಾಯತ್‌ನ ಜಿಲ್ಲಾ ಐಇಸಿ ಸಂಯೋಜಕರಾದ ಫಕೀರಪ್ಪ ತುಮ್ಮಣ್ಣನವರ ರವರು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಮಂಜುನಾಥ ಪಟಗಾರ, ಉಪಾಧ್ಯಕ್ಷರಾದ ಶ್ರೀಮತಿ ಆಶಾ ನಾಯ್ಕ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ವೆಂಕಟರಮಣ ಪಟಗಾರ ನೇತೃತ್ವದಲ್ಲಿ ಜನಪ್ರತಿನಿಧಿಗಳು ಮತ್ತು ಗ್ರಾಮಸ್ಥರಿಗೆ ನರೇಗಾ ಮಾಹಿತಿ ಹಾಗೂ ಕ್ಯೂಆರ್‌ ಕೋಡ್‌ಯುಳ್ಳ ಕರಪತ್ರಗಳನ್ನು ವಿತರಿಸಿ ಕೂಲಿ ಕೆಲಸ ಹಾಗೂ ವೈಯಕ್ತಿಕ ಕಾಮಗಾರಿಗಳಿಗೆ ಬೇಡಿಕೆ ಅರ್ಜಿ ಸಲ್ಲಿಸುವಂತೆ ಅರಿವು ಮೂಡಿಸಲಾಯಿತು.

ಮುಂದಿನ ಆರ್ಥಿಕ ವರ್ಷದ ಕ್ರಿಯಾ ಯೋಜನೆ ತಯಾರಿಸಲು ಗ್ರಾಮ ಪಂಚಾಯತಿ ಮಟ್ಟದಲ್ಲಿ ಈಗಲೇ ಬೇಡಿಕೆ ಸಂಗ್ರಹಿಸಲಾಗುತ್ತಿದ್ದು, ನರೇಗಾದಡಿ ಲಭ್ಯವಿರುವ ಕೂಲಿ ಕೆಲಸ, ವೈಯಕ್ತಿಕ ಹಾಗೂ ಸಮುದಾಯ ಕಾಮಗಾರಿಗಳ ಬೇಡಿಕೆಯನ್ನು ಸಾರ್ವಜನಿಕರು ಸಲ್ಲಿಸಬಹುದಾಗಿದೆ‌. ಸಾರ್ವಜನಿಕರಿಂದ ಬಂದ ಬೇಡಿಕೆಗಳನ್ನು ಗ್ರಾಮ ಸಭೆಯಲ್ಲಿ ಅನುಮೋದನೆ ಪಡೆದು, 2025-26 ನೇ ಸಾಲಿನ ಸಮಗ್ರ ಕ್ರಿಯಾ ಯೋಜನೆ ತಯಾರಿಸಿ ಜಿಲ್ಲಾ ಪಂಚಾಯಿತಿಯಿಂದ ಅನುಮೋದನೆ ಪಡೆದು, ಸಾರ್ವಜನಿಕರು ಯೋಜನೆಯಡಿ ಸೌಲಭ್ಯ ಪಡೆದುಕೊಳ್ಳಲು ಅನುಕೂಲ ಮಾಡಿಕೊಡಲಾಗುವುದು ಎಂದು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಶ್ರೀ ಮಂಜುನಾಥ ಪಟಗಾರ ಅವರು ತಿಳಿಸಿದರು.

Vijayaprabha Mobile App free

ಗ್ರಾಪಂ ನಿಂದ ಉದ್ಯೋಗ ಖಾತರಿ ಯೋಜನೆಯಡಿ ಕೈಗೊಳ್ಳುವ ಸಮುದಾಯ ಕಾಮಗಾರಿಗಳಾದ ಶಾಲಾ ಸಮಗ್ರ ಅಭಿವೃದ್ಧಿ, ಕೆರೆ, ಕಾಲುವೆ, ರಸ್ತೆ ನಿರ್ಮಾಣದಂತ ಕಾಮಗಾರಿಗಳಲ್ಲಿ ಉದ್ಯೋಗ ಚೀಟಿ ಹೊಂದಿದ ಪ್ರತಿ ಅರ್ಹ ಕುಟುಂಬಕ್ಕೆ ದಿನಕ್ಕೆ 349 ಕೂಲಿ ಮೊತ್ತದೊಂದಿಗೆ ವರ್ಷಕ್ಕೆ 100 ದಿನ ಕೂಲಿ ಕೆಲಸ ಒದಗಿಸಿ ವಾರ್ಷಿಕವಾಗಿ 34800 ರೂಗಳನ್ನು ಗಳಿಸುವ ಅವಕಾಶ ಕಲ್ಪಸಲಾಗಿದೆ.

ಹಾಗೆಯೇ ಯೋಜನೆಯಡಿ ವೈಯಕ್ತಿಕ ಕಾಮಗಾರಿಗಳಾದ ಬಚ್ಚಲು ಗುಂಡಿ, ಎರೆಹುಳು ತೊಟ್ಟಿ, ದನದ ಕೊಟ್ಟಿಗೆ, ಕುರಿ ಶೇಡ್, ಕೋಳಿ ಶೇಡ್, ತೋಟಗಾರಿಕಾ ಬೆಳೆಗಳಾದ ಅಡಿಕೆ, ಮಾವು, ಸಿಬೆ ಹಾಗೂ ಇನ್ನಿತರೆ ಬೆಳೆಗಳನ್ನು ತೆಗೆದುಕೊಂಡು ಆರ್ಥಿಕವಾಗಿ ಸಬಲರಾಗಬಹುದು. 65 ವರ್ಷ ಮೇಲ್ಪಟ್ಟ ವೃದ್ಧರು, ಅಂಗವಿಕಲರು ಹಾಗೂ ಲಿಂಗತ್ವ ಅಲ್ಪ ಸಂಖ್ಯಾತರಿಗೆ ಕೆಲಸದಲ್ಲಿ ರಿಯಾಯತಿ ನೀಡುವ ಮೂಲಕ ಪ್ರೋತ್ಸಾಹಿಸಲಾಗುತ್ತಿದೆ. ಯೋಜನೆಯಡಿ ಇರುವ ಸೌಲಭ್ಯಗಳನ್ನು ಪಡೆಯಲು ತಿಳಿಸಿ ನರೇಗಾ ಮಾಹಿತಿ ಇರುವ ಕರಪತ್ರಗಳನ್ನು ಹಂಚಿ ವೈಯಕ್ತಿಕ ಕಾಮಗಾರಿಗಳನ್ನು ತೆಗೆದುಕೊಂಡು ಆರ್ಥಿಕವಾಗಿ ಸಬಲರಾಗುವಂತೆ ಜಿಲ್ಲಾ ಐಇಸಿ ಸಂಯೋಜಕರಾದ ಫಕೀರಪ್ಪ ತುಮ್ಮಣ್ಣನವರ ಪ್ರೋತ್ಸಾಹಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಉಪಾಧ್ಯಕ್ಷರಾದ ಶ್ರೀಮತಿ ಆಶಾ ನಾಯ್ಕ, ಸಿಡಿಪಿಒ ಶ್ರೀಮತಿ ಭಾರತಿ ಪಟಗಾರ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಶ್ರೀ ವೆಂಕಟರಮಣ ಪಟಗಾರ, ಸಿಆರ್‌ಪಿ ಎನ್.ಆರ್. ನಾಯ್ಕ, ಗ್ರಾಪಂ ಹಿರಿಯ ಸದಸ್ಯರಾದ ಬಿ.ಜಿ. ಶಾನಬಾಗ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ವಿಷಯ ನಿರ್ವಾಹಕರಾದ ಮಾರುತಿ ನಾಯ್ಕ್, ಗ್ರಾಪಂ ಸಿಬ್ಬಂದಿ  ಸೇರಿದಂತೆ ಎನ್‌ಆರ್‌ಎಲ್‌ಎಂ ಯೋಜನೆಯಡಿ ಕಾರ್ಯನಿರ್ವಹಿಸುವ ಸ್ವಸಹಾಯ ಸಂಘಗಳ ಮಹಿಳೆಯರು, ಆಶಾ, ಅಂಗನವಾಡಿ, ಆರೋಗ್ಯ ಕಾರ್ಯಕರ್ತರು, ಸಾರ್ವಜನಿಕರು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.