ದಾವಣಗೆರೆ: ವಿಶ್ವ ಜನಸಂಖ್ಯಾ ದಿನಾಚರಣೆ ಹಿನ್ನೆಲೆ ಜಾಥಾಕ್ಕೆ ಚಾಲನೆ

ದಾವಣಗೆರೆ ಜು.15 :ವಿಶ್ವ ಜನಸಂಖ್ಯಾ ದಿನಾಚರಣೆ-2022 ಹಿನ್ನಲೆಯಲ್ಲಿ “ಕುಟುಂಬ ಯೋಜನೆ ಉಪಾಯಗಳನ್ನು ನಮ್ಮದಾಗಿಸಿ, ಉನ್ನತಿಯ ಹೊಸ ಅಧ್ಯಾಯ ಬರೆಯೋಣ” ಎಂಬ ಘೋಷಣೆಯೊಂದಿಗೆ ಶುಕ್ರವಾರ ಚಿಗಟೇರಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಹಮ್ಮಿಕೊಂಡಿದ್ದ ಕಾಲ್ನಡಿಗೆ ಜಾಥಾಕ್ಕೆ ಜಿಲ್ಲಾಧಿಕಾರಿ…

ದಾವಣಗೆರೆ ಜು.15 :ವಿಶ್ವ ಜನಸಂಖ್ಯಾ ದಿನಾಚರಣೆ-2022 ಹಿನ್ನಲೆಯಲ್ಲಿ “ಕುಟುಂಬ ಯೋಜನೆ ಉಪಾಯಗಳನ್ನು ನಮ್ಮದಾಗಿಸಿ, ಉನ್ನತಿಯ ಹೊಸ ಅಧ್ಯಾಯ ಬರೆಯೋಣ” ಎಂಬ ಘೋಷಣೆಯೊಂದಿಗೆ ಶುಕ್ರವಾರ ಚಿಗಟೇರಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಹಮ್ಮಿಕೊಂಡಿದ್ದ ಕಾಲ್ನಡಿಗೆ ಜಾಥಾಕ್ಕೆ ಜಿಲ್ಲಾಧಿಕಾರಿ ಶಿವಾನಂದ ಕಾಪಾಶಿ ಹಸಿರು ನಿಶಾನೆ ತೋರಿಸುವುದರ ಮೂಲಕ ಚಾಲನೆ ನೀಡಿದರು.

ಜಾಥಾವು ಜಿಲ್ಲಾ ಆಸ್ಪತ್ರೆ ಆವರಣದಿಂದ ಪ್ರಾರಂಭವಾಗಿ ಗುಂಡಿ ವೃತ್ತದ ಮುಖಾಂತರ, ಡೆಂಟಲ್ ಕಾಲೇಜು ಮಾರ್ಗವಾಗಿ ಕುವೆಂಪು ಕನ್ನಡ ಭವನದ ವರೆಗೆ ಸಾಗಿತು.

ಇದೇ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗರಾಜ್, ಡಾ.ರೇಣುಕಾರಾಧ್ಯ, ಆರ್.ಸಿ.ಹೆಚ್ ಅಧಿಕಾರಿ ಡಾ.ಮೀನಾಕ್ಷಿ.ಕೆ.ಎಸ್, ಚಿಗಟೇರಿ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಷಣ್ಮಖಪ್ಪ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಗಂಗಾಧರ್, ಜಿಲ್ಲಾ ಕುಷ್ಟರೋಗ ನಿಯಂತ್ರಣಾಧಿಕಾರಿ ಡಾ.ಮುರುಳೀಧರ್ ಸೇರಿದಂತೆ ಇಲಾಖಾ ವೈದ್ಯರು, ಸಿಬ್ಬಂದಿ ವರ್ಗದವರು ವಿವಿಧ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು, ಮೇಲ್ವಿಚಾರಕ ಸಿಬ್ಬಂದಿಗಳು, ನರ್ಸಿಂಗ್ ಕಾಲೇಜು ಹಾಗೂ ಪ್ಯಾರಾ ಮೆಡಿಕಲ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.