Rash Driving: ಲಾರಿ ಚಾಲಕನ ಅಜಾಗರೂಕತೆಯಿಂದ ಕುರಿಗಾಹಿಗೆ 11 ಲಕ್ಷ ನಷ್ಟ!

ವಿಜಯನಗರ: ರಸ್ತೆ ಬದಿ ತೆರಳುತ್ತಿದ್ದ ಕುರಿಗಳ ಹಿಂಡಿನ ಮೇಲೆ ಚಾಲಕನೋರ್ವ ಲಾರಿ ಹರಿಸಿದ ಪರಿಣಾಮ 50ಕ್ಕೂ ಅಧಿಕ ಕುರಿಗಳು ಸಾವನ್ನಪ್ಪಿ, 10ಕ್ಕೂ ಕುರಿಗಳು ಗಾಯಗೊಂಡ ಘಟನೆ ಕೂಡ್ಲಿಗಿ ತಾಲ್ಲೂಕಿನ ಶಿವಪುರದಲ್ಲಿ ನಡೆದಿದೆ. ಇಲ್ಲಿನ ರಾಷ್ಟ್ರೀಯ…

ವಿಜಯನಗರ: ರಸ್ತೆ ಬದಿ ತೆರಳುತ್ತಿದ್ದ ಕುರಿಗಳ ಹಿಂಡಿನ ಮೇಲೆ ಚಾಲಕನೋರ್ವ ಲಾರಿ ಹರಿಸಿದ ಪರಿಣಾಮ 50ಕ್ಕೂ ಅಧಿಕ ಕುರಿಗಳು ಸಾವನ್ನಪ್ಪಿ, 10ಕ್ಕೂ ಕುರಿಗಳು ಗಾಯಗೊಂಡ ಘಟನೆ ಕೂಡ್ಲಿಗಿ ತಾಲ್ಲೂಕಿನ ಶಿವಪುರದಲ್ಲಿ ನಡೆದಿದೆ.

ಇಲ್ಲಿನ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ತಾಲ್ಲೂಕಿನ ಗೊಲ್ಲರಹಟ್ಟಿ ಗ್ರಾಮದ ಯರೆಪ್ಪ ಎಂಬುವವರು ತಮ್ಮ 220 ಕುರಿಗಳನ್ನು ಶಿವಪುರ ಅರಣ್ಯ ಪ್ರದೇಶದಲ್ಲಿ ಮೇಯಿಸಿಕೊಂಡು ಗ್ರಾಮಕ್ಕೆ ವಾಪಸ್ಸಾಗುತ್ತಿದ್ದರು. ಈ ವೇಳೆ ಚಾಲಕ ಪ್ರೇಮ್ ಸಿಂಗ್ ಎಂಬಾತ ರಸ್ತೆ ಬದಿ ತೆರಳುತ್ತಿದ್ದ ಕುರಿಗಳ ಹಿಂಡಿನ ಮೇಲೇ ಲಾರಿ ಚಲಾಯಿಸಿಕೊಂಡು ಹೋಗಿದ್ದಾನೆ. 

ಲಾರಿ ಹರಿದ ಪರಿಣಾಮ ರಸ್ತೆಯಲ್ಲೇ 55 ಕುರಿಗಳು ಸಾವನ್ನಪ್ಪಿದ್ದು, ಇದರಿಂದಾಗಿ ಸುಮಾರು 11 ಲಕ್ಷ ರೂಪಾಯಿ ನಷ್ಟವಾಗಿದ್ದಾಗಿ ಕುರಿಗಾಹಿ ಯರೆಪ್ಪ ಅಳಲು ತೋಡಿಕೊಂಡಿದ್ದಾರೆ. ಈ ಸಂಬಂಧ ಸ್ಥಳಕ್ಕೆ ಭೇಟಿ ನೀಡಿದ ಕೂಡ್ಲಿಗಿ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ‌‌.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.