ಹೊಸಪೇಟೆ(ವಿಜಯನಗರ): ವಿಜಯನಗರ ಜಿಲ್ಲಾಡಳಿತದ ವತಿಯಿಂದ ಶ್ರೀಕೃಷ್ಣ ಜಯಂತಿಯನ್ನು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರದಂದು ಅರ್ಥಪೂರ್ಣವಾಗಿ ಆಚರಿಸಲಾಯಿತು.
ವಿಜಯನಗರ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಎನ್.ಮಹೇಶ್ಬಾಬು ಅವರು ಶ್ರೀ ಕೃಷ್ಣನ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಎಲ್ಲ್ಲರಿಗೂ ಜಯಂತಿಯ ಶುಭಾಷಯಗಳನ್ನು ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕಚೇರಿ ತಹಶೀಲ್ದಾರ್ ಬಸವರಾಜ, ಸಮಾಜದ ಮುಖಂಡರು ಸೇರಿದಂತೆ ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಇದ್ದರು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.