Deepawali Gift: ಬಾಲ ಮಂದಿರದ ಬಾಲಕಿಯರಿಗೆ ಸಚಿವರಿಂದ ದೀಪಾವಳಿ ಉಡುಗೊರೆ

ಕಾರವಾರ: ದೀಪಾವಳಿ ಹಬ್ಬದ ಪ್ರಯುಕ್ತ ನಗರದ ಸರಕಾರಿ ಬಾಲ ಮಂದಿರದ ಬಾಲಕಿಯರಿಗೆ ಜಿಲ್ಲಾ ಉಸ್ತುವಾರಿ ಸಚಿವರ ಮಂಕಾಳ ವೈದ್ಯ ಶುಕ್ರವಾರ ಹೊಸ ಬಟ್ಟೆ ಮತ್ತು ಸಿಹಿ ತಿಂಡಿ ವಿತರಿಸಿ ದೀಪಾವಳಿ ಹಬ್ಬದ ಶುಭಾಶಯಗಳನ್ನು ತಿಳಿಸಿದರು.…

ಕಾರವಾರ: ದೀಪಾವಳಿ ಹಬ್ಬದ ಪ್ರಯುಕ್ತ ನಗರದ ಸರಕಾರಿ ಬಾಲ ಮಂದಿರದ ಬಾಲಕಿಯರಿಗೆ ಜಿಲ್ಲಾ ಉಸ್ತುವಾರಿ ಸಚಿವರ ಮಂಕಾಳ ವೈದ್ಯ ಶುಕ್ರವಾರ ಹೊಸ ಬಟ್ಟೆ ಮತ್ತು ಸಿಹಿ ತಿಂಡಿ ವಿತರಿಸಿ ದೀಪಾವಳಿ ಹಬ್ಬದ ಶುಭಾಶಯಗಳನ್ನು ತಿಳಿಸಿದರು. ನಂತರ ಮಕ್ಕಳೊಂದಿಗೆ ಸಂವಾದ ನಡೆಸಿದ ಸಚಿವರು, ಉತ್ತಮ ರೀತಿಯಲ್ಲಿ ವಿದ್ಯಾಭ್ಯಾಸ ಮಾಡಿ, ಉನ್ನತ ಸಾಧನೆಗಳನ್ನು ಮಾಡಿ. ಬಾಲಮಂದಿರದಲ್ಲಿ ಇದಕ್ಕಾಗಿ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು  ನಿಮಗೆ  ಒಡಗಿಸಲಾಗುವುದು ಎಂದರು.

ಬಾಲಕಿಯರ ಆಶಯದಂತೆ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಪ್ರವಾಸ ತೆರಳಲು ಅಗತ್ಯ ಅನುಮತಿಯನ್ನು ನೀಡುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಿದ ಸಚಿವರು ಪ್ರವಾಸ ಕುರಿತ ಸಂಪೂರ್ಣ ವೆಚ್ಚವನ್ನು ತಾವು ಪಾವತಿಸುವುದಾಗಿ ಹಾಗೂ ಬಾಲಮಂದಿರದಲ್ಲಿ ದೂರದರ್ಶನದ ವ್ಯವಸ್ಥೆ ಮಾಡುವುದಾಗಿ ತಿಳಿಸಿದರು.

ಬಾಲಮಂದಿರದಲ್ಲಿ ಬಾಲಕಿಯರ ಆರೋಗ್ಯಕರ ಬೆಳವಣಿಗೆಗೆ ಮತ್ತು ಶೈಕ್ಷಣಿಕ ಪ್ರಗತಿಗೆ ಯಾವುದೇ ಅಡ್ಡಿಯಾಗದಂತೆ ನೋಡಿಕೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು. ಬಾಲ ಮಂದಿರದ ಬಾಲಕಿಯರ ಪ್ರತಿಭಾ ಕಾರ್ಯಕ್ರಮ ವೀಕ್ಷಿಸಿದ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.

Vijayaprabha Mobile App free

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕೆ.ಲಕ್ಷ್ಮೀ ಪ್ರಿಯಾ, ಉಪ ವಿಭಾಗಾಧಿಕಾರಿ  ಕನಿಷ್ಕ, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವಿರೂಪಾಕ್ಷ ಪಾಟೀಲ್, ನಿರ್ಮಿತಿ ಕೇಂದ್ರದ ನಿರ್ದೇಶಕ ಹರ್ಷ ಮತ್ತಿತರರು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.