ಕೂಡ್ಲಿಗಿ: ಮಾತನಾಡುತ್ತಿದ್ದಾಗ ಮೊಬೈಲ್ ಬ್ಲಾಸ್ಟ್ ಆಗಿದ್ದು, ಯುವಕ ಗಾಯಗೊಂಡಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಗೆದ್ಲಗಟ್ಟೆ ಗ್ರಾಮದಲ್ಲಿ ನಡೆದಿದೆ.
ಹೌದು, ಪವನ್ ಎನ್ನುವವರು ಮೊಬೈಲ್‌ನಲ್ಲಿ ಮಾತನಾಡುತ್ತಿದ್ದರು. ಈ ವೇಳೆ ದೊಡ್ಡ ಶಬ್ದದೊಂದಿಗೆ ಸ್ಫೋಟಗೊಂಡ ಮೊಬೈಲ್, ಸುಟ್ಟು ಕರಕಲಾಗಿದೆ. ಪವನ್ ಅವರ ಮುಖ ಮತ್ತು ಕಣ್ಣಿಗೆ ಗಂಭೀರವಾದ ಗಾಯಗಳಾಗಿವೆ. ಕೂಡಲೇ ಪವನ್ ಅವರನ್ನು ತಂದೆ ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.