ದಾವಣಗೆರೆ: ಜಿಲ್ಲೆಯಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಹೈನುಗಾರಿಕೆ ತರಬೇತಿಯನ್ನು ಫೆಬ್ರವರಿ 06 ಮತ್ತು 07 ರಂದು ಆಯೋಜಿಸಲಾಗಿದೆ.
ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್ , 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕಾಗಿದ್ದು, ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ , ದಾವಣಗೆರೆ ಕಚೇರಿ ದೂ. ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment