ಗದಗ: ಜಿಲ್ಲೆಯಲ್ಲಿ ನಿಗೂಢ ಕಾಯಿಲೆಯಿಂದ 20ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿವೆ. ಇದು ಸಾರ್ವಜನಿಕರನ್ನು ಆತಂಕಕ್ಕೀಡಾಗುವಂತೆ ಮಾಡಿದೆ.
ಪೋಮಪ್ಪ ಲಮಾಣಿನಿಗೆ ಸೇರಿದ 60 ಕುರಿಗಳ ಪೈಕಿ 20 ಕುರಿಗಳು ನಿಗೂಢವಾಗಿ ಸಾವನ್ನಪ್ಪಿವೆ. ಸ್ಥಳಕ್ಕೆ ಪಶುಸಂಗೋಪನಾ ಇಲಾಖೆಯ ವೈದ್ಯರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುರಿಗಳ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
ಲ್ಯಾಬ್ ಪರೀಕ್ಷೆಯ ನಂತರವೇ ಕುರಿಗಳ ಸಾವಿಗೆ ನಿಖರ ಕಾರಣ ತಿಳಿದುಬರಬೇಕಿದೆ ಎಂದು ಪಶುವೈದ್ಯರು ತಿಳಿಸಿದ್ದಾರೆ. ಅದುವರೆಗೆ ಇರುವ ಕುರಿಗಳನ್ನು ಜೋಪಾನವಾಗಿ ಕಾಯ್ದುಕೊಳ್ಳಬೇಕಾದ ಸ್ಥಿತಿ ಕುರಿ ಸಾಕಣೆದಾರರಿಗೆ ಎದುರಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.