ದಾವಣಗೆರೆ ಆ.03: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು ಹಾಗೂ ಹೊನ್ನಾಳಿ ಕ್ಷೇತ್ರದ ಶಾಸಕರಾದ ಎಂ.ಪಿ. ರೇಣುಕಾಚಾರ್ಯ ಹಾಗೂ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಅವರು ಹೊನ್ನಾಳಿ ಹಾಗೂ ನ್ಯಾಮತಿ ತಾಲೋಕುಗಳ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಹಾನಿಗೊಳಗಾಗಿರುವ ಹೊನ್ನಾಳಿ ಹಾಗೂ ನ್ಯಾಮತಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಆರುಂಡಿ, ಕಂಚಿಕೊಪ್ಪ, ಜೀನಳ್ಳಿ, ಗುಡ್ಡೆಹಳ್ಳಿ, ಮಲ್ಲಿಗೇನಹಳ್ಳಿ, ಬೆಳಗುತ್ತಿ ಗ್ರಾಮಗಳ ಮನೆಗಳಿಗೆ ನೀರು ನುಗ್ಗಿರುವುದು, ಬೆಳೆಹಾನಿ, ರಾಜ ಕಾಲುವೆ ಒತ್ತುವರಿ, ಹಾನಿಗೊಳಗಾದ ರಸ್ತೆ ಸೇತುವೆ, ಮೆಕ್ಕೆಜೋಳ ಪ್ರದೇಶಗಳ ಹಾನಿ ಮುಂತಾದ ಪ್ರದೇಶಗಳನ್ನು ಪರಿಶೀಲಿಸಿದರು
ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಹುಲುಮನಿ ತಿಮ್ಮಣ್ಣ, ತಹಶೀಲ್ದಾರ್ ರೇಣುಕ ಉಪಸ್ಥಿತರಿದ್ದರು.