ಬಳ್ಳಾರಿ: ಬಳ್ಳಾರಿ ಜಿಲ್ಲೆಯನ್ನು ಕೇಂದ್ರ ಸರ್ಕಾರದ ಸ್ಮಾರ್ಟ್ ಸಿಟಿ ಯೋಜನೆಗೆ ಸೇರ್ಪಡೆಗೊಳಿಸಬೇಕು ಎಂದು ಬಳ್ಳಾರಿ ಜಿಲ್ಲೆಯ ಸಂಸದ ವೈ ದೇವೇಂದ್ರಪ್ಪ ನವರು ದೆಹಲಿಯಲ್ಲಿಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಈ ವೇಳೆ ಮಾತನಾಡಿದ ಬಳ್ಳಾರಿ ಸಂಸದ ವೈ ದೇವೇಂದ್ರಪ್ಪ ಅವರು, ಕಲ್ಯಾಣ ಕರ್ನಾಟಕ ಭಾಗದ ಅತ್ಯಂತ ಹಳೆಯ ನಗರವಾಗಿರುವ ಬಳ್ಳಾರಿ ಆರ್ಥಿಕತೆಯ ಕೇಂದ್ರವಾಗಿದ್ದು, ಸ್ಮಾರ್ಟ್ ಸಿಟಿ ಯೋಜನೆಗೆ ಸೇರಿಸುವುದರಿಂದ ನಗರದ ಮೂಲಭೂತ ಸೌಕರ್ಯಗಳು ಹೆಚ್ಚಾಗುತ್ತವೆ. ಇದರಿಂದ ಜಿಲ್ಲೆಯು ಸಹ ಅಭಿವೃದ್ಧಿ ಕಾಣುತ್ತದೆ.
ಆದ್ದರಿಂದ ಬಳ್ಳಾರಿ ಜಿಲ್ಲೆಯನ್ನು ಕೇಂದ್ರ ಸರ್ಕಾರದ ಸ್ಮಾರ್ಟ್ ಸಿಟಿ ಯೋಜನೆಗೆ ಸೇರಿಸಬೇಕು ಎಂದು ಸಂಸದ ವೈ ದೇವೇಂದ್ರಪ್ಪ ಅವರು ಹೇಳಿದ್ದಾರೆ.