ದಾವಣಗೆರೆ ಫೆ. 15: ದಾವಣಗೆರೆ ತಾಲ್ಲೂಕಿನಾದ್ಯಂತ ಫೆ. 27 ರಿಂದ ಮಾ. 02 ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮವನ್ನು ಯಶಸ್ವಿಯಾಗಿಸಲು ಸಿದ್ಧತೆ ಕೈಗೊಳ್ಳುವ ಸಲುವಾಗಿ ತಾಲ್ಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಭೆ ಫೆ. 16 ರಂದು ಬೆಳಿಗ್ಗೆ 10.30 ಗಂಟೆಗೆ ತಹಸಿಲ್ದಾರರ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಸಭೆಯ ಅಧ್ಯಕ್ಷತೆಯನ್ನು ದಾವಣಗೆರೆ ತಹಸಿಲ್ದಾರ್ ಗಿರೀಶ್ ಅವರು ವಹಿಸುವರು.
ದಾವಣಗೆರೆ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳುವ ಕುರಿತು ಸಿದ್ಧತೆ ಕೈಗೊಳ್ಳಲು ಫೆ. 16 ರಂದು ಮಧ್ಯಾಹ್ನ 12 ಗಂಟೆಗೆ ಮಹಾನಗರಪಾಲಿಕೆ ಸಭಾಂಗಣದಲ್ಲಿ ಅರ್ಬನ್ ಟಾಸ್ಕ್ ಫೋರ್ಸ್ ಸಭೆ ನಡೆಯಲಿದ್ದು, ಆಯುಕ್ತರಾದ ವಿಶ್ವನಾಥ ಮುದಜ್ಜಿ ಸಭೆಯ ಅಧ್ಯಕ್ಷತೆ ವಹಿಸುವರು ಎಂದು ತಾಲ್ಲೂಕು ವೈದ್ಯಾಧಿಕಾರಿ ಡಾ. ಎಲ್.ಡಿ. ವೆಂಕಟೇಶ್ ತಿಳಿಸಿದ್ದಾರೆ.