ವಿಜಯನಗರ: ನವೋದಯ ವಿದ್ಯಾಲಯದಲ್ಲಿ 9ನೇ ತರಗತಿಗೆ ಅರ್ಜಿ ಆಹ್ವಾನ

ಹೊಸಪೇಟೆ(ವಿಜಯನಗರ): ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಯ ಚಿಕ್ಕಜೋಗಿಹಳ್ಳಿಯ ಜವಾಹರ ನವೋದಯ ವಿದ್ಯಾಲಯದಲ್ಲಿ 9ನೇ ತರಗತಿಯಲ್ಲಿ ಖಾಲಿ ಇರುವ 10ಸ್ಥಾನಗಳ ಪ್ರವೇಶಕ್ಕಾಗಿ ಅರ್ಜಿ ಅಹ್ವಾನಿಸಲಾಗಿದೆ ಎಂದು ಚಿಕ್ಕಜೋಗಿಹಳ್ಳಿಯ ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯರಾದ ಎ.ಸುಂದರ್ ಅವರು…

navodaya-vidyalaya-vijayaprabha-news

ಹೊಸಪೇಟೆ(ವಿಜಯನಗರ): ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಯ ಚಿಕ್ಕಜೋಗಿಹಳ್ಳಿಯ ಜವಾಹರ ನವೋದಯ ವಿದ್ಯಾಲಯದಲ್ಲಿ 9ನೇ ತರಗತಿಯಲ್ಲಿ ಖಾಲಿ ಇರುವ 10ಸ್ಥಾನಗಳ ಪ್ರವೇಶಕ್ಕಾಗಿ ಅರ್ಜಿ ಅಹ್ವಾನಿಸಲಾಗಿದೆ ಎಂದು ಚಿಕ್ಕಜೋಗಿಹಳ್ಳಿಯ ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯರಾದ ಎ.ಸುಂದರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಯಲ್ಲಿ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ 8ನೇ ತರಗತಿಯಲ್ಲಿ ಅಧ್ಯಯನ ಮಾಡುತ್ತಿರುವಂತಹ ವಿದ್ಯಾರ್ಥಿಗಳು 2008ನೇ ಮೇ.01ರಿಂದ 2010ನೇ ಏ.30ರೊಳಗಾಗಿ ಜನಿಸಿರುವವರು ಅರ್ಜಿ ಸಲ್ಲಿಸಬಹುದು. ಒಬಿಸಿ ಅಥವಾ ಹಿಂದುಳಿದ ವರ್ಗಗಳ ಮೀಸಲಾತಿ ಬಯಸುವ ವಿದ್ಯಾರ್ಥಿಗಳು ತಮ್ಮ ಜಾತಿಯು ಕೇಂದ್ರ ಸರ್ಕಾರ ಪ್ರಕಟಿಸಿರುವ ಒಬಿಸಿ ಪಟ್ಟಿಯಲ್ಲಿ ಕಡ್ಡಾಯವಾಗಿರಬೇಕು. ಪ್ರವೇಶ ಪರೀಕ್ಷೆಯು 2023ನೇ ಫೆ.11ರಂದು ಚಿಕ್ಕಜೋಗಿಹಳ್ಳಿಯ ಜವಾಹರ ನವೋದಯ ವಿದ್ಯಾಲಯದಲ್ಲಿ ನಡೆಯಲಿದ್ದು, ಈಗಾಗಲೇ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭವಾಗಿದ್ದು, ಆಸಕ್ತರು ಅ.15ರೊಳಗಾಗಿ ಆನ್‍ಲೈನ್ ವೆಬ್‍ಸೈಟ್ www.navoday.gov.in ಮುಖಾಂತರ ಅರ್ಜಿಗಳನ್ನು ಸಲ್ಲಿಸಬಹುದು ಎಂದು ಅವರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಚಿಕ್ಕಜೋಗಿಹಳ್ಳಿಯ ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯರನ್ನು ಹಾಗೂ ವಿದ್ಯಾಲಯದ ದೂ.ಸಂ:08391-223490ಗೆ ಸಂಪರ್ಕಿಸಬಹುದಾಗಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.