ವಿಜಯನಗರ: ಜ.16ರಂದು ರೈಲ್ವೆ ಮೇಲ್ಸೇತುವೆ ನಿರ್ಮಾಣ; ಸಂಸದರಾದ ವೈ.ದೇವೇಂದ್ರಪ್ಪ, ಸಚಿವರಾದ ಆನಂದ್‍ಸಿಂಗ್ ಶಂಕುಸ್ಥಾಪನೆ..!

ಹೊಸಪೇಟೆ(ವಿಜಯನಗರ),: ವಿಜಯನಗರ ಜಿಲ್ಲೆಯ ನೈರುತ್ಯ ರೈಲ್ವೆ ವಿಭಾಗದಿಂದ ಲೆವೆಲ್ ಕ್ರಾಸಿಂಗ್ ಗೇಟ್ ಸಂಖ್ಯೆ 85ಕ್ಕೆ ಬದಲಾಗಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಶಂಕುಸ್ಥಾಪನಾ ಸಮಾರಂಭವನ್ನು ಜ.16ರಂದು ಬೆಳಗ್ಗೆ 10.30ಕ್ಕೆ ಹೊಸಪೇಟೆಯ ಅನಂತಶಯನ ಬಳಿಯ ಲೆವೆಲ್ ಕ್ರಾಸಿಂಗ್…

anand sing and y devendrappa1

ಹೊಸಪೇಟೆ(ವಿಜಯನಗರ),: ವಿಜಯನಗರ ಜಿಲ್ಲೆಯ ನೈರುತ್ಯ ರೈಲ್ವೆ ವಿಭಾಗದಿಂದ ಲೆವೆಲ್ ಕ್ರಾಸಿಂಗ್ ಗೇಟ್ ಸಂಖ್ಯೆ 85ಕ್ಕೆ ಬದಲಾಗಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಶಂಕುಸ್ಥಾಪನಾ ಸಮಾರಂಭವನ್ನು ಜ.16ರಂದು ಬೆಳಗ್ಗೆ 10.30ಕ್ಕೆ ಹೊಸಪೇಟೆಯ ಅನಂತಶಯನ ಬಳಿಯ ಲೆವೆಲ್ ಕ್ರಾಸಿಂಗ್ ಗೇಟ್ ಸಂಖ್ಯೆ 85 ಬಳಿ ಆಯೋಜಿಸಲಾಗಿದೆ.

ಸಂಸದರಾದ ವೈ.ದೇವೇಂದ್ರಪ್ಪ ಮತ್ತು ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರಾದ ಆನಂದ್‍ಸಿಂಗ್ ಅವರು ಶಂಕುಸ್ಥಾಪನೆ ನೆರವೇರಿಸುವರು.

ಮುಜರಾಯಿ, ಹಜ್ ಹಾಗೂ ವಕ್ಫ್ ಸಚಿವರು ಮತ್ತು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಶಶಿಕಲಾ ಅಣ್ಣಾಸಾಹೇಬ ಜೊಲ್ಲೆ ಅವರು ಅಧ್ಯಕ್ಷತೆ ವಹಿಸುವರು.

Vijayaprabha Mobile App free

ಸಂಸದರಾದ ಜಿ.ಎಂ.ಸಿದ್ದೇಶ್ವರ, ಶಾಸಕರಾದ ಪಿ.ಟಿ.ಪರಮೇಶ್ವರ ನಾಯ್ಕ, ಎನ್.ವೈ ಗೋಪಾಲಕೃಷ್ಣ, ಭೀಮನಾಯ್ಕ ಎಲ್.ಬಿ.ಪಿ, ಜಿ.ಕರುಣಾಕರರೆಡ್ಡಿ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎಸ್.ವಿ.ರಾಮಚಂದ್ರ, ಎಂಎಲ್‍ಸಿಗಳಾದ ಡಾ.ಚಂದ್ರಶೇಖರ್ ಬಿ.ಪಾಟೀಲ, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ನಗರಸಭೆಯ ಅಧ್ಯಕ್ಷರಾದ ಸುಂಕಮ್ಮ, ಹುಡಾ ಅಧ್ಯಕ್ಷರಾದ ಅಶೋಕ್ ಜೀರೆ, ಹುಬ್ಬಳ್ಳಿ ವಿಭಾಗೀಯ ರೈಲ್ವೇ ವ್ಯವಸ್ಥಾಪಕರು ಸೇರಿದಂತೆ ಇನ್ನಿತತರು ಪಾಲ್ಗೊಳ್ಳಲಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.