ಮುಂಡಗೋಡ: ತಂಗಿಯ ಜೊತೆ ಅಣ್ಣನೋರ್ವ ದೈಹಿಕ ಸಂಪರ್ಕ ಬೆಳೆಸಿದ್ದು, ಅಣ್ಣನಿಂದ ಗರ್ಭವತಿಯಾದ ಬಾಲಕಿ ಮಗುವಿಗೆ ಜನ್ಮ ನೀಡಿದ್ದಾಳೆ.
ಉತ್ತರಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ಈ ಘಟನೆ ನಡೆದಿದೆ. ತಾಲೂಕಿನ ಕುಂದರ್ಗಿ ಗ್ರಾಮದ ಗಿರೀಶ ಭೋವಿ(19) ಬಂಧಿತ ಆರೋಪಿಯಾಗಿದ್ದಾನೆ.
ಬಾಲಕಿಗೆ ಸಂಬಂಧದಲ್ಲಿ ಅಣ್ಣನಾಗಿರುವ ಈತ ನೀಚ ಕೃತ್ಯ ಎಸಗಿದ್ದಾನೆ. 9 ತಿಂಗಳ ಹಿಂದೆ ಈತ ಬಾಲಕಿ ಜೊತೆ ದೈಹಿಕ ಸಂಪರ್ಕ ಬೆಳೆಸಿದ್ದ ಎನ್ನಲಾಗಿದೆ. ಇದರಿಂದ ಇದೀಗ ಗರ್ಭವತಿಯಾಗಿದ್ದ ಬಾಲಕಿ ಯಲ್ಲಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದಾಳೆ. ಈ ಸಂಬಂಧ ಯುವಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.