ಪಂಚಾಯತ್‍ರಾಜ್ ದಿವಸ: ಮಲಪನಗುಡಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮಿಸುವ ಸಾಧ್ಯತೆ

ಹೊಪೇಟೆಸ(ವಿಜಯನಗರ ಜಿಲ್ಲೆ) ಫೆ.23: ಪಂಚಾಯತ್‍ರಾಜ್ ದಿವಸದಂದು ಪ್ರಧಾನಮಂತ್ರಿ ನರೇಂದ್ರಮೋದಿ ಅವರು ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಮಲಪನಗುಡಿಗೆ ಭೇಟಿ ನೀಡಲಿರುವ ಸಾಧ್ಯತೆ ಹಿನ್ನೆಲೆಯಲ್ಲಿ ಜಿಪಂ ಸಿಇಒ ಭೋಯರ್ ಹರ್ಷಲ್ ನಾರಾಯಣರಾವ್ ಅವರು ಮಲಪನಗುಡಿಯ ಶಾಲೆಯಲ್ಲಿ…

ಹೊಪೇಟೆಸ(ವಿಜಯನಗರ ಜಿಲ್ಲೆ) ಫೆ.23: ಪಂಚಾಯತ್‍ರಾಜ್ ದಿವಸದಂದು ಪ್ರಧಾನಮಂತ್ರಿ ನರೇಂದ್ರಮೋದಿ ಅವರು ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಮಲಪನಗುಡಿಗೆ ಭೇಟಿ ನೀಡಲಿರುವ ಸಾಧ್ಯತೆ ಹಿನ್ನೆಲೆಯಲ್ಲಿ ಜಿಪಂ ಸಿಇಒ ಭೋಯರ್ ಹರ್ಷಲ್ ನಾರಾಯಣರಾವ್ ಅವರು ಮಲಪನಗುಡಿಯ ಶಾಲೆಯಲ್ಲಿ ಬುಧವಾರ ಅಧಿಕಾರಿಗಳ ಸಭೆ ನಡೆಸಿದರು.

ಈ ಗ್ರಾಪಂ ವ್ಯಾಪ್ತಿಯ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲಿಸಿದ ಅವರು ಅನುಷ್ಠಾನಗೊಳಿಸಬೇಕಾದ ಕಾಮಗಾರಿಗಳ ಕುರಿತು ಕ್ರಮವಹಿಸಲು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಮಲಪನಗುಡಿ ಗ್ರಾಪಂ ಗ್ರಂಥಾಲಯ ಸಂಪೂರ್ಣ ಡಿಜಿಟಲೀಕರಣವಾಗಬೇಕು, ಈಗ ಜಲಜೀವಮಿಶನ್ ಅಡಿ ನಡೆಯುತ್ತಿರುವ ಕಾಮಗಾರಿಗಳು ಶೀಘ್ರ ಪೂರ್ಣಗೊಳಿಸಿ ಮನೆ-ಮನೆಗೆ ನಳದ ಮೂಲಕ ಶುದ್ಧ ಕುಡಿಯುವ ನೀರುಪೂರೈಸುವ ಕೆಲಸ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

Vijayaprabha Mobile App free

ಈ ಗ್ರಾಮದಲ್ಲಿರುವ 73 ಸ್ತ್ರೀಶಕ್ತಿ ಸಂಘಗಳ ಒಕ್ಕೂಟಕ್ಕೆ ಅಗತ್ಯ ಸಹಾಯ-ಸಹಕಾರ ನೀಡುವುದರ ಮೂಲಕ ಅವರನ್ನು ಬಲಪಡಿಸುವ ಕೆಲಸ ಮಾಡಬೇಕಿದೆ ಎಂದು ತಿಳಿಸಿದ ಜಿಪಂ ಸಿಇಒ ಭೋಯರ್ ಹರ್ಷಲ್ ನಾರಾಯಣರಾವ್ ಅವರು ಗ್ರಾಮದ ಆಸ್ಪತ್ರೆಯಲ್ಲಿ ವೈದ್ಯಕೀಯ ಉಪಕರಣಗಳ ಖರೀದಿಗೆ ಸೂಚನೆ ನೀಡಿದರು.

ಗ್ರಾಮದಲ್ಲಿರುವ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಿದ ಅವರು ಈ ಘಟಕಕ್ಕೆ ಅಗತ್ಯ ಫಿನಿಶಿಂಗ್ ವ್ಯವಸ್ಥೆ ಹಾಗೂ ಸಿಸಿಟಿವಿ ಅಳವಡಿಕೆ ಹಾಗೂ ಇನ್ನೀತರ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ತಿಳಿಸಿದ ಜಿಪಂ ಸಿಇಒ ಭೋಯರ್ ಹರ್ಷಲ್ ಅವರು ಶಾಲಾ ಆವರಣದಲ್ಲಿ 1.80 ಕೋಟಿ ರೂ.ವೆಚ್ಚದಲ್ಲಿ ನಡೆಯುತ್ತಿರುವ ಕಾಮಗಾರಿ ಪರಿಶೀಲಿಸಿ ಗುಣಮಟ್ಟದಲ್ಲಿ ರಾಜೀಯಾಗದಂತೆ ನಿಗದಿಪಡಿಸಿದ ಅವಧಿಯೊಳಗೆ ಪೂರ್ಣಗೊಳಿಸಲು ಸೂಚಿಸಿದರು.

ಈ ಸಂದರ್ಭದಲ್ಲಿ ಜಿಪಂ ಉಪಕಾರ್ಯದರ್ಶಿ ಕೆ.ತಿಮ್ಮಪ್ಪ,ಯೋಜನಾ ನಿರ್ದೇಶಕ ಸಮೀರ್‍ಮುಲ್ಲಾ, ಪಂಚಾಯತ್‍ರಾಜ್ ಇಇ ಜಯರಾಂನಾಯಕ್, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ವಿಶ್ವನಾಥ, ಜಿಪಂ ಸಹಾಯಕ ಕಾರ್ಯದರ್ಶಿ ಉಮೇಶ,ನಿರ್ಮಿತಿ ಕೇಂದ್ರದ ರವಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.