ದಾವಣಗೆರೆ: ತಂಬಾಕು ಮುಕ್ತ ಸಮಾಜ ನಿರ್ಮಾಣ ಮಾಡಲು ಸಾರ್ವಜನಿಕರ ಸಹಕಾರ ಅಗತ್ಯ – ಅಪರ ಜಿಲ್ಲಾಧಿಕಾರಿ ಲೋಕೇಶ್ ಪಿ.ಎನ್

ದಾವಣಗೆರೆ ಆ.19 : ಜಿಲ್ಲೆಯಾದ್ಯಂತ ಸರ್ಕಾರಿ ಕಚೇರಿಗಳು ಹಾಗೂ ಶಾಲಾ ಕಾಲೇಜುಗಳ ಸುತ್ತಮುತ್ತಲಿನ ಪ್ರದೇಶವನ್ನು ತಂಬಾಕು ಮುಕ್ತವನ್ನಾಗಿಸಲು ಅಧಿಕಾರಿಗಳೊಂದಿಗೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಅಪರ ಜಿಲ್ಲಾಧಿಕಾರಿ ಲೋಕೇಶ್ ಪಿ.ಎನ್ ಹೇಳಿದರು. ಶುಕ್ರವಾರ ಜಿಲ್ಲಾಡಳಿತ…

Deputy Collector Lokesh P.N

ದಾವಣಗೆರೆ ಆ.19 : ಜಿಲ್ಲೆಯಾದ್ಯಂತ ಸರ್ಕಾರಿ ಕಚೇರಿಗಳು ಹಾಗೂ ಶಾಲಾ ಕಾಲೇಜುಗಳ ಸುತ್ತಮುತ್ತಲಿನ ಪ್ರದೇಶವನ್ನು ತಂಬಾಕು ಮುಕ್ತವನ್ನಾಗಿಸಲು ಅಧಿಕಾರಿಗಳೊಂದಿಗೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಅಪರ ಜಿಲ್ಲಾಧಿಕಾರಿ ಲೋಕೇಶ್ ಪಿ.ಎನ್ ಹೇಳಿದರು.

ಶುಕ್ರವಾರ ಜಿಲ್ಲಾಡಳಿತ ಭವನದ ಅಪರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ಆಯೋಜಿಸಲಾಗಿದ್ದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸರ್ಕಾರಿ ಕಚೇರಿಗಳಲ್ಲಿ ತಂಬಾಕು ಮತ್ತು ಧೂಮಪಾನದ ಕುರಿತು ಜಾಗೃತಿ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸಬೇಕು. ಶಾಲಾ-ಕಾಲೇಜುಗಳ ಸುತ್ತಲಿನ 100 ಗಜದ ಸುತ್ತಳತೆಯ ವ್ಯಾಪ್ತಿಯ ಒಳಗೆ ತಂಬಾಕು ಉತ್ಪನ್ನಗಳನ್ನು ಕಡ್ಡಾಯವಾಗಿ ಮಾರಾಟ ಮಾಡದಂತೆ ನಿಷೇಧಿಸಲಾಗಿದೆ. ಕಾಯ್ದೆ ಉಲ್ಲಂಘಿಸಿ ಮಾರಾಟ ಮಾಡುವವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಕರ್ನಾಟಕದಲ್ಲಿ ಪ್ರತಿದಿನ ಹೊಸದಾಗಿ 293 ಮಕ್ಕಳು ತಂಬಾಕು ಸೇವನೆಗೆ ಒಳಗಾಗುತ್ತಿದ್ದಾರೆ. ಆದ್ದರಿಂದ ಶಾಲಾ-ಕಾಲೇಜು, ಸಾರ್ವಜನಿಕ ಪದೇಶದಲ್ಲಿ ತಂಬಾಕು ಸೇವನೆ ಮಾಡದಂತೆ ಹೆಚ್ಚಿನ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಕೈಗೊಳ್ಳಬೇಕು. ನಗರಗಳಲ್ಲಿ ತಂಬಾಕು ಪರವಾನಗಿ ಪಡೆಯುವ ಬಗ್ಗೆ ಚರ್ಚೆ ನಡೆಸಿದ್ದು ಎಸ್.ಒ.ಪಿ ಬಂದ ನಂತರ ಅದರ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.

Vijayaprabha Mobile App free

ಅಬಕಾರಿ ಇಲಾಖೆಯ ಉಪ ಆಯುಕ್ತ ಶಿವಪ್ರಕಾಶ್ ಬಿ ಮಾತನಾಡಿ, ಅನೇಕ ಕಡೆ ಅಂಗಡಿಗಳಲ್ಲಿ ಚಾಕ್‍ಲೇಟ್ ರೂಪದ ವಸ್ತುಗಳಲ್ಲಿ ಗಾಂಜಾ ಮಾರಾಟ ಮಾಡಲಾಗುತ್ತಿದೆ ಎಂಬ ದೂರುಗಳಿವೆ, ಹಾಗಾಗಿ ತಂಬಾಕು ದಾಳಿ ಮಾಡುವ ಸಂದರ್ಭದಲ್ಲಿ ಈ ಕುರಿತು ಸೂಕ್ಷ್ಮವಾಗಿ ಗಮನಿಸಿ ಅಂತಹ ಪ್ರಕರಣಗಳಿದ್ದರೆ ಅಬಕಾರಿ ಇಲಾಖೆಯ ಗಮನಕ್ಕೆ ತನ್ನಿ ಎಂದು ಸಲಹೆ ನೀಡಿದರು.

ತಂಬಾಕು ನಿಯಂತ್ರಣ ಕೋಶದ ಸಲಹೆಗಾರ ಸತೀಶ್ ಏಪ್ರಿಲ್ ಮಾಹೆಯಿಂದ ಪ್ರಸಕ್ತ ತಿಂಗಳವರೆಗೆ ಒಟ್ಟು 226 ಕಡೆಗೆ ದಾಳಿ ನಡೆಸಿ 42,850 ರೂ. ದಂಡ ಸಂಗ್ರಹಿಸಲಾಗಿದೆ. ವಿಶ್ವ ತಂಬಾಕು ರಹಿತ ದಿನಾಚರಣೆಯ ಪ್ರಯುಕ್ತ ವಿವಿದೆಡೆ ಗಿಡ ನೆಡುವ ಹಾಗೂ ತಂಬಾಕು ಸೇವನೆ ಮಾಡದಂತೆ ಜಾಗೃತಿ ಜಾಥಾ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಡಿಡಿಪಿಐ ತಿಪ್ಪೇಶಪ್ಪ, ಜಿ.ಪಂ ಸಹಾಯಕ ಯೋಜನಾಧಿಕಾರಿ ಸುಮಲತಾ ಎಸ್.ಪಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.