ದಾವಣಗೆರೆ ಜು.28: ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಂಗಸಂಸ್ಥೆಯಾದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಹರಿಹರದಲ್ಲಿ 2022-23ನೇ ಸಾಲಿನ ಸ್ವಾತಂತ್ರ್ಯ ಅಮೃತ್ ಮಹೋತ್ಸವದ ಮುನ್ನಡೆ ಯೋಜನೆಯ, ಮೂಲಕ 18 ರಿಂದ 25 ವರ್ಷದೊಳಗಿನ ಹಿಂದುಳಿದ ವರ್ಗಗಳಾದ III-B, IIIA, IIA, Cat-I ವರ್ಗದ ನಿರುದ್ಯೋಗಿ ಯುವಕ/ಯುವತಿಯರಿಗಾಗಿ ಉದ್ಯೋಗಾವಕಾಶ ಕಲ್ಪಿಸಲು ಎಸ್.ಎಸ್.ಎಲ್.ಸಿ/ಪಿ.ಯು.ಸಿ/ಐ.ಟಿ.ಐ/ಡಿಪ್ಲೋಮ/ಬಿ.ಇ, ಮತ್ತು ಯಾವುದೇ ಪದವಿ ಪಾಸ್ ಆಗಿರುವ ಅಭ್ಯರ್ಥಿಗಳಿಗೆ ಇಂಡಸ್ಟ್ರಿಯಲ್ ಆಟೋಮೇಷನ್ ಟೆಕ್ನಿಷಿಯನ್, ಇಂಟರ್‍ನೆಟ್ ಆಪ್ ಥಿಂಗ್ಸ್ ((IoT)), 3ಆ ಪ್ರಿಂಟಿಂಗ್ (RPT), ಸಿ.ಎನ್.ಸಿ. ಮಿಲ್ಲಿಂಗ್ ಮಷಿನ್ ಆಪರೇಟರ್, ಕನ್ವೆನ್‍ಷನಲ್ ಮಿಲ್ಲಿಂಗ್ ಮಷಿನ್ ಆಪರೇಟರ್, ಸಿ.ಎನ್.ಸಿ ಪ್ರೋಗ್ರಾಮಿಂಗ್ & ಆಪರೇಷನ್, ರೋಬೋಟ್ ಟೆಕ್ನಿಷಿಯನ್, ಪ್ರೊಡಕ್ಷನ್ ಇಂಜಿನಿಯರ್ (ಅಂಆ/ಅಂಒ), ಕೋರ್ಸ್‍ಗಳಲ್ಲಿ ಅಲ್ಪಾವಧಿ ತರಬೇತಿಗಳನ್ನು ಸಂಪೂರ್ಣ ಉಚಿತವಾಗಿ ನೀಡಲಾಗುತ್ತದೆ.
ತರಬೇತಿ ಮುಗಿದ ನಂತರ ಉದ್ಯೋಗಾವಕಾಶಕ್ಕೆ ಮಾರ್ಗದರ್ಶನ ನೀಡಲಾಗುವುದು. ಅರ್ಜಿ ಸಲ್ಲಿಸಲು ಆಗಸ್ಟ್.19 ಕೊನೆಯ ದಿನಾಂಕ ವಾಗಿರುತ್ತದೆ. ಹೆಚ್ಚಿನ ವಿವರಗಳಿಗಾಗಿ ಸಂಪರ್ಕಿಸಿ, ಪ್ರಾಂಶುಪಾಲರು, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, 22 C & D KIADB, ಇಂಡಸ್ಟ್ರಿಯಲ್ ಏರಿಯ ಹರ್ಲಾಪುರ, KSRTC P ಕೆ.ಎಸ್.ಆರ್.ಟಿ.ಸಿ ಡಿಪೋ ಹತ್ತಿರ ಹರಿಹರ ಫೋನ್: 08192-243937, 9916018111, 8884488202, 8711913947 ಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.