ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ 75ನೇ ಜನ್ಮದಿನ ಹಿನ್ನೆಲೆ ದಾವಣಗೆರೆಯ ಎಸ್.ಎಸ್. ಮೈದಾನದಲ್ಲಿ ಆಯೋಜಿಸಿರುವ ಅಮೃತ ಮಹೋತ್ಸವ ಕಾರ್ಯಕ್ರಮದ ವೇದಿಕೆಗೆ ಎಐಸಿಸಿ ನಾಯಕ ರಾಹುಲ್ ಗಾಂಧಿ, ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ & ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಗಮಿಸಿದ್ದಾರೆ.
ಈ ವೇಳೆ ರಾಹುಲ್ ಗಾಂಧಿ ಅವರು ಸಿದ್ದರಾಮಯ್ಯ ಅವರಿಗೆ ಹಸ್ತ ಲಾಘವ ಮಾಡಿ, ಹುಟ್ಟುಹಬ್ಬಕ್ಕೆ ಶುಭಕೋರಿದರು. ಬಳಿಕ ಸಿದ್ದು ರಾಹುಲ್ ಅವರಿಗೆ ಬುದ್ಧನ ವಿಗ್ರಹ ನೀಡಿ ಸನ್ಮಾನಿಸಿದರು.
ಸಿದ್ದು, ಡಿಕೆಶಿ ನೇತೃತ್ವದಲ್ಲೇ ಚುನಾವಣೆ: ರಾಹುಲ್
ಸಿದ್ದು, ಡಿಕೆಶಿ ನಾಯಕತ್ವದಲ್ಲಿ ಕಾಂಗ್ರೆಸ್ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ಎಐಸಿಸಿ ನಾಯಕ ರಾಹುಲ್ ಗಾಂಧಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ದಾವಣಗೆರೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ನನ್ನ, ಸಿದ್ದರಾಮಯ್ಯ ನಡುವೆ ವಿಶೇಷ ಸಂಬಂಧವಿದೆ. ಅವರನ್ನು ಇಷ್ಟಪಡುತ್ತೇನೆ, ವಿಚಾರಗಳನ್ನೂ ಒಪ್ಪುತ್ತೇನೆ ಎಂದ ಅವರು, ಬಿಜೆಪಿ ಒಡೆದು ಆಳುತ್ತಿದೆ. ಕರ್ನಾಟಕದಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿದೆ. ಬಸವಣ್ಣನವರ ‘ಕಾಯಕವೇ ಕೈಲಾಸ’ ತತ್ವಕ್ಕೆ ಬಿಜೆಪಿ ವಿರುದ್ಧವಾಗಿದೆ ಎಂದು ಆರೋಪಿಸಿದ್ದಾರೆ.