ತಂಬಾಕು ನಿಯಂತ್ರಣ ತನಿಖಾ ತಂಡದಿಂದ ಕ್ಷಿಪ್ರ ದಾಳಿ: ಪ್ರಕರಣ ದಾಖಲು

ದಾವಣಗೆರೆ, ಅ.19: ದಾವಣಗೆರೆ ಜಿಲ್ಲೆಯನ್ನು ಕೋಟ್ಪಾ ಉನ್ನತ ಅನುಷ್ಟಾನ ಜಿಲ್ಲೆಯೆಂದು ಘೋಷಿಸುವ ನಿಟ್ಟಿನಲ್ಲಿ ಸಾರ್ವಜನಿಕರಲ್ಲಿ ತಂಬಾಕು ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಲು ದಾವಣಗೆರೆ ನಗರದ ವಿವಿಧೆಡೆ ಅ.19 ರಂದು ಜಿಲ್ಲಾ ತಂಬಾಕು ನಿಯಂತ್ರಣ ತನಿಖಾ…

Tobacco vijayaprabha news

ದಾವಣಗೆರೆ, ಅ.19: ದಾವಣಗೆರೆ ಜಿಲ್ಲೆಯನ್ನು ಕೋಟ್ಪಾ ಉನ್ನತ ಅನುಷ್ಟಾನ ಜಿಲ್ಲೆಯೆಂದು ಘೋಷಿಸುವ ನಿಟ್ಟಿನಲ್ಲಿ ಸಾರ್ವಜನಿಕರಲ್ಲಿ ತಂಬಾಕು ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಲು ದಾವಣಗೆರೆ ನಗರದ ವಿವಿಧೆಡೆ ಅ.19 ರಂದು ಜಿಲ್ಲಾ ತಂಬಾಕು ನಿಯಂತ್ರಣ ತನಿಖಾ ದಳದಿಂದ ತಂಬಾಕು ದಾಳಿ ನಡೆಸಲಾಯಿತು.

ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಬಾಲ ಕಾರ್ಮಿಕರ ಯೋಜನೆ, ಮಹಾನಗರ ಪಾಲಿಕೆ, ಶಿಕ್ಷಣ ಇಲಾಖೆ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಹಾಗೂ ಪೊಲೀಸ್ ಇಲಾಖೆ ಇವರ ಸಹಯೋಗದೊಂದಿಗೆ ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿತ್ತು.

ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ಇವರ ನೇತೃತ್ವದಲ್ಲಿ ತಂಡ ರಚಿಸಿಕೊಂಡು ಸಿಗರೇಟು ಮತ್ತು ಇತರ ತಂಬಾಕು ಉತ್ಪನ್ನಗಳ ಅಧಿನಿಯಮ-2003 ಸೆಕ್ಷನ್ 4 ರಡಿ 13 ಹಾಗೂ ಸೆಕ್ಷನ್ 6ಎ ಅಡಿಯಲ್ಲಿ 06, ಸೆಕ್ಷನ್ 6ಬಿ ಅಡಿಯಲ್ಲಿ 02 ಪ್ರಕರಣ ಸೇರಿದಂತೆ ಒಟ್ಟು 21 ಪ್ರಕರಣಗಳನ್ನು ದಾಖಲಿಸಿ, ರೂ. 2100/- ಗಳನ್ನು ದಂಡದ ರೂಪದಲ್ಲಿ ಸ್ಥಳದಲ್ಲಿಯೇ ಸಂಗ್ರಹಿಸಲಾಯಿತು.

Vijayaprabha Mobile App free

ತಂಡವು ದಾವಣಗೆರೆ ನಗರದ ಎಮ್.ಜಿ ರೋಡ್, ಬಿ.ಟಿ.ಗಲ್ಲಿ ಮತ್ತು ಕೆ.ಆರ್ ಮಾರ್ಕೆಟ್ ರಸ್ತೆಯ ಎಲ್ಲಾ ಹೊಟೇಲ್, ಬಾರ್, ಪಾನ್‍ಶಾಪ್, ಬಸ್ ನಿಲ್ದಾಣ ಇತ್ಯಾದಿ ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳನ್ನು ಮಾರುವವರು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳನ್ನು ಸೇವಿಸುವವರಿಗೆ ಸ್ಥಳದಲ್ಲಿಯೇ ದಂಡ ಹಾಕುವ ಮೂಲಕ ಜಾಗೃತಿ ಮೂಡಿಸಿದರು. ಹಾಗೂ ಸಾರ್ವಜನಿಕ ಸ್ಥಳದಲ್ಲಿರುವ ಅಂಗಡಿ ಮಾಲೀಕರುಗಳು ಧೂಮಪಾನ ನಿಷೇಧದ ಬಗ್ಗೆ ಪ್ರದರ್ಶಿಸಬೇಕಾದ ಫಲಕಗಳನ್ನು ಕಟ್ಟುನಿಟ್ಟಾಗಿ ಅಳವಡಿಸಲು ತಾಕೀತು ಮಾಡಿದರು.

ಕೋಟ್ಪಾ ಕಾಯಿದೆ ಸೆಕ್ಷನ್ 6ಎ ಪ್ರಕಾರ 18 ವರ್ಷದೊಳಗಿನ ಮಕ್ಕಳಿಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಮತ್ತು ಮಕ್ಕಳಿಂದ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡಿಸುವುದು ನಿಷೇಧಿಸಿರುವುದರ ಬಗ್ಗೆ, ಹಾಗೂ ಶಾಲಾ, ಕಾಲೇಜು, ಹಾಗು ಶಿಕ್ಷಣ ಸಂಸ್ಥೆಗಳ 100 ಯಾರ್ಡ್ ಅಂತರದಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟವನ್ನು ಮಾಡದಿರುವುದು, ಸೆಕ್ಷನ್ 4 ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನವನ್ನು ನಿಷೇಧಸಿದ್ದು ಮತ್ತು ತಂಬಾಕು ಉತ್ಪನ್ನಗಳ ಪ್ಯಾಕ್‍ಗಳ ಮೇಲೆ ಎಚ್ಚರಿಕೆ ಚಿನ್ಹೆ ಇಲ್ಲದೆ ಮಾರಾಟ ಮಾಡುವುದನ್ನು ನಿಷೇಧಿಸಿರುವ ಬಗ್ಗೆ ತಂಡದ ಸದಸ್ಯರು ಮಾಹಿತಿ ನೀಡಿದರು.

ತಂಬಾಕು ನಿಯಂತ್ರಣ ತನಿಖಾ ತಂಡದಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಸತೀಶ ಕಲಹಾಳ, ಸಮಾಜ ಕಾರ್ಯಕರ್ತ ದೇವರಾಜ್ ಕೆ.ಪಿ., ತಾಲ್ಲೂಕು ದೈಹಿಕ ಶಿಕ್ಷಣಾಧಿಕಾರಿ ಭೈರಪ್ಪ.ಕೆ, ಮಹಾನಗರಪಾಲಿಕೆಯ ಆರೋಗ್ಯ ನಿರೀಕ್ಷಕರಾದ ಪ್ರಕಾಶ್.ಬಿ, ನಿಖಿಲ್ ಜೆ.ಹೆಚ್, ಕೆ.ರಾಜಪ್ಪ, ಬಸವನಗರ ಪೊಲೀಸ್ ಠಾಣೆಯ ಮುಖ್ಯ ಪೇದೆಗಳಾದ ಲಿಂಗರಾಜ್.ಬಿ, ಸುರೇಶ್.ಪಿ ಸೇರಿದಂತೆ ಇತರರು ಹಾಜರಿದ್ದರು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.