Bus Accident: ಭತ್ತ ಕಟಾವು ಯಂತ್ರದ ಲಾರಿಗೆ ಡಿಕ್ಕಿಯಾಗಿ ಖಾಸಗಿ ಬಸ್ ಪಲ್ಟಿ: ಪ್ರಯಾಣಿಕರಿಗೆ ಗಾಯ

ರಿಪ್ಪನ್‌ಪೇಟೆ: ಶಿವಮೊಗ್ಗ ಜಿಲ್ಲೆಯ ರಿಪ್ಪನ್ ಪೇಟೆಯ ಚಿಕ್ಕಜೇನಿಯಲ್ಲಿ ಖಾಸಗಿ ಬಸ್ಸೊಂದು ಲಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಹಲವು ಪ್ರಯಾಣಿಕರು ಗಂಭೀರ ಗಾಯಗೊಂಡ ಘಟನೆ ಮಂಗಳವಾರ ನಡೆದಿದೆ. ಶಿವಮೊಗ್ಗದಿಂದ ಕುಂದಾಪುರಕ್ಕೆ ತೆರಳುತಿದ್ದ ದುರ್ಗಾಂಬಾ ಬಸ್ ಹೊಸನಗರದಿಂದ…

ರಿಪ್ಪನ್‌ಪೇಟೆ: ಶಿವಮೊಗ್ಗ ಜಿಲ್ಲೆಯ ರಿಪ್ಪನ್ ಪೇಟೆಯ ಚಿಕ್ಕಜೇನಿಯಲ್ಲಿ ಖಾಸಗಿ ಬಸ್ಸೊಂದು ಲಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಹಲವು ಪ್ರಯಾಣಿಕರು ಗಂಭೀರ ಗಾಯಗೊಂಡ ಘಟನೆ ಮಂಗಳವಾರ ನಡೆದಿದೆ.

ಶಿವಮೊಗ್ಗದಿಂದ ಕುಂದಾಪುರಕ್ಕೆ ತೆರಳುತಿದ್ದ ದುರ್ಗಾಂಬಾ ಬಸ್ ಹೊಸನಗರದಿಂದ ಬರುತಿದ್ದ ಭತ್ತ ಕಟಾವು ಯಂತ್ರವನ್ನು ಕೊಂಡೊಯ್ಯುತ್ತಿದ್ದ ತಮಿಳುನಾಡಿನ ಲಾರಿಗೆ ಡಿಕ್ಕಿಯಾದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿ ಈ ಅವಘಡ ಸಂಭವಿಸಿದೆ.

ಬಸ್ ನಲ್ಲಿ ಸುಮಾರು 20 ಪ್ರಯಾಣಿಕರಿದ್ದು 15 ಜನರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಗಾಯಾಳುಗಳನ್ನು ತಕ್ಷಣ ರಿಪ್ಪನ್‌ಪೇಟೆ ಆಸ್ಪತ್ರೆಗೆ ದಾಖಲಿಸಲಾಗಿದೆ.‌ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.