ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ 87 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಧ್ವಜಾರೋಹಣ ಮೂಲಕ 87 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ ನೀಡಲಾಯಿತು.
ಇಂದಿನಿಂದ ಮೂರು ದಿನಗಳ ಕಾಲ ಮಂಡ್ಯದ ಸ್ಯಾಂಜೋ ಆಸ್ಪತ್ರೆ ಹಿಂಭಾಗ ನಡೆಯಲಿರುವ 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ರಾಷ್ಟ್ರ ಧ್ವಜ, ನಾಡ ಧ್ವಜ ಹಾಗೂ ಪರಿಷತ್ತಿನ ಧ್ವಜಗಳ ಧ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ ನೀಡಲಾಗಿದೆ.
ಸಚಿವ ಚೆಲುವರಾಯಸ್ವಾಮಿ ಧ್ವಜಾರೋಹಣ ನೆರವೇರಿಸಿದರು. ಕಸಾಪ ರಾಜ್ಯಾಧ್ಯಕ್ಷ ನಾಡೋಜ ಮಹೇಶ್ ಜೋಶಿ ನಾಡ ಧ್ವಜಾರೋಹಣ ನೆರವೇರಿಸಿದರು. ಬಳಿಕ ಸಿಎಂ ಸಿದ್ದರಾಮಯ್ಯ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.