ದಾವಣಗೆರೆ ಆ.22 :ಸೋಮವಾರ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಮಟ್ಟದ ಎಲ್ಲಾ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾದ ಸಸಿ ನೆಡುವ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಅವರು ಸಸಿ ನೆಡುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಜಗನ್ನಾಥ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ, ವಲಯ ಅರಣ್ಯಾಧಿಕಾರಿ ದೇವರಾಜ್, ಉಪ ವಲಯ ಅರಣ್ಯಾಧಿಕಾರಿ ಇದಾಯತ್ ಸೇರಿದಂತೆ ಜಿಲ್ಲಾಡಳಿತದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.