ದಾವಣಗೆರೆ: ಗುತ್ತಿಗೆ ಆಧಾರಿತ ಹುದ್ದೆಗಳ ಆಯ್ಕೆಪಟ್ಟಿ ಪ್ರಕಟ

ದಾವಣಗೆರೆ ಸೆ.13: ದಾವಣಗೆರೆ ನಗರ ಪ್ರದೇಶದ ವ್ಯಾಪ್ತಿಯಲ್ಲಿ 15ನೇ ಹಣಕಾಸು ಆಯೋಗದಡಿ ನಗರ ಪ್ರದೇಶದ ವ್ಯಾಪ್ತಿಯಲ್ಲಿನ “ನಮ್ಮ ಕ್ಲಿನಿಕ್” ಕಾರ್ಯಕ್ರಮದಡಿಯಲ್ಲಿ ಗುತ್ತಿಗೆ ಆಧಾರಿತ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಕುರಿತಂತೆ ಆಕ್ಷೇಪಣೆ…

medical college vijayaprabha news

ದಾವಣಗೆರೆ ಸೆ.13: ದಾವಣಗೆರೆ ನಗರ ಪ್ರದೇಶದ ವ್ಯಾಪ್ತಿಯಲ್ಲಿ 15ನೇ ಹಣಕಾಸು ಆಯೋಗದಡಿ ನಗರ ಪ್ರದೇಶದ ವ್ಯಾಪ್ತಿಯಲ್ಲಿನ “ನಮ್ಮ ಕ್ಲಿನಿಕ್” ಕಾರ್ಯಕ್ರಮದಡಿಯಲ್ಲಿ ಗುತ್ತಿಗೆ ಆಧಾರಿತ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಕುರಿತಂತೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ದಾವಣಗೆರೆ ನಗರ ಪ್ರದೇಶದ 15ನೇ ಹಣಕಾಸು ಆಯೋಗದಡಿ ದಾವಣಗೆರೆ ನಗರ ಪ್ರದೇಶದ ವ್ಯಾಪ್ತಿಯಲ್ಲಿನ “ನಮ್ಮ ಕ್ಲಿನಿಕ್” ಕಾರ್ಯಕ್ರಮದಡಿಯಲ್ಲಿ ಮಂಜೂರಾಗಿ ಖಾಲಿ ಉಳಿದಿರುವ ಗುತ್ತಿಗೆ ಆಧಾರಿತ ವೈದ್ಯಾಧಿಕಾರಿ ಹಾಗೂ ಶುಶ್ರೂಷಕಿ ಹುದ್ದೆಗೆ ಆಗಸ್ಟ್ 29 ರಂದು ಸ್ವೀಕೃತಿಯಾದ ಅರ್ಜಿಗಳಲ್ಲಿ, ರೋಸ್ಟರ್ ಹಾಗೂ ಮೆರಿಟ್ ಆಧಾರದ ಮೇಲೆ ತಾತ್ಕಾಲಿಕವಾಗಿ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ, ಎಸ್.ಎಸ್. ಹೈಟೆಕ್ ಆಸ್ಪತ್ರೆ ಹತ್ತಿರ, ಎನ್.ಸಿ.ಸಿ ಕ್ಯಾಂಪ್ ಪಕ್ಕ, ಶ್ರೀರಾಮ ನಗರ ರಸ್ತೆ, ದಾವಣಗೆರೆ-577005, ಇಲ್ಲಿನ ಸೂಚನಾ ಫಲಕದಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಸೆಪ್ಟೆಂಬರ್ 12 ರಂದು ಪ್ರಕಟಿಸಲಾಗಿದೆ.

ಈ ಪಟ್ಟಿಗೆ ಬಗ್ಗೆ ಯಾವುದೇ ಆಕ್ಷೇಪಣೆಗಳು ಇದ್ದಲ್ಲಿ ಲಿಖಿತ ಹಾಗೂ ದಾಖಲೆಗಳೊಂದಿಗೆ ಖುದ್ದಾಗಿ ಅಭ್ಯರ್ಥಿಯೇ ಸೆಪ್ಟೆಂಬರ್ 19 ರ ಸಂಜೆ 5 ಗಂಟೆಯೊಳಗಾಗಿ ಸಲ್ಲಿಸಬಹುದಾಗಿದೆ. ನಿಗಧಿತ ದಿನಾಂಕದ ನಂತರ ಬಂದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.