ದಾವಣಗೆರೆ ಜಿಲ್ಲೆಗೆ ಪ್ರತ್ಯೇಕ ಅಂಚೆ ಅಧೀಕ್ಷಕರ ವಿಭಾಗ ಕಛೇರಿ ಮಂಜೂರು: ಸಂಸದ ಜಿ.ಎಂ.ಸಿದ್ದೇಶ್ವರ

ದಾವಣಗೆರೆ ಫೆ. 25 : ದಾವಣಗೆರೆಗೆ ಪ್ರತ್ಯೇಕ ಅಂಚೆ ಅಧೀಕ್ಷಕರ ವಿಭಾಗ ಕಛೇರಿಯನ್ನು ಹೊಸದಾಗಿ ರಚಿಸಿ ಮಂಜೂರಾತಿ ಮಾಡಿ ಕೇಂದ್ರ ಸಂವಹನ ಸಚಿವಾಲಯ, ಅಂಚೆ ಇಲಾಖೆಯ ಅಸಿಸ್ಟೆಂಟ್ ಡೈರೆಕ್ಟರ್ ಜನರಲ್ ಅವರು ಆದೇಶ ಹೊರಡಿಸಿದ್ದಾರೆ…

gm-siddeshwara-vijayaprabha-news

ದಾವಣಗೆರೆ ಫೆ. 25 : ದಾವಣಗೆರೆಗೆ ಪ್ರತ್ಯೇಕ ಅಂಚೆ ಅಧೀಕ್ಷಕರ ವಿಭಾಗ ಕಛೇರಿಯನ್ನು ಹೊಸದಾಗಿ ರಚಿಸಿ ಮಂಜೂರಾತಿ ಮಾಡಿ ಕೇಂದ್ರ ಸಂವಹನ ಸಚಿವಾಲಯ, ಅಂಚೆ ಇಲಾಖೆಯ ಅಸಿಸ್ಟೆಂಟ್ ಡೈರೆಕ್ಟರ್ ಜನರಲ್ ಅವರು ಆದೇಶ ಹೊರಡಿಸಿದ್ದಾರೆ ಎಂದು ಸಂಸದ ಡಾ. ಜಿ.ಎಂ. ಸಿದ್ದೇಶ್ವರ ಅವರು ತಿಳಿಸಿದ್ದಾರೆ.

ದಾವಣಗೆರೆ ಜಿಲ್ಲೆ ಚಿತ್ರದುರ್ಗ ಜಿಲ್ಲೆಯಿಂದ ಬೇರ್ಪಟ್ಟ ನಂತರ ದಾವಣಗೆರೆ ಜಿಲ್ಲೆಗೆ ಪ್ರತ್ಯೇಕ ಅಂಚೆ ಅಧೀಕ್ಷರ ವಿಭಾಗ ಕಛೇರಿ ಬೇಕು ಎನ್ನುವುದು ಸಾರ್ವರ್ತಿಕ ಕೂಗಾಗಿತ್ತು, ಇದನ್ನು ಮನಗಂಡು ಪ್ರತ್ಯೇಕ ಅಂಚೆ ಕಛೇರಿಗೆ ಮನವಿ ಮಾಡಲಾಗಿತ್ತು. ಕಳೆದ ನಾಲ್ಕೈದು ವರ್ಷಗಳಲ್ಲಿ ಸಂವಂಹನ ಸಚಿವಾಲಯ ಇಲಾಖೆಗೆ ಆರ್ಥಿಕ ಹೊರೆಯಾಗುವಂತಹ ಯಾವುದೇ ಹೊಸ ಕಛೇರಿಗಳನ್ನು ತೆರೆಯಲು ಆತುರದ ನಿರ್ಧಾರ ಕೈಗೊಂಡಿರಲಿಲ್ಲ. ಆದರೆ, ದಾವಣಗೆರೆ ಜಿಲ್ಲೆಗೆ ಪ್ರತ್ಯೇಕ ಅಂಚೆ ಅಧೀಕ್ಷಕರ ವಿಭಾಗ ಕಛೇರಿ ಅಗತ್ಯ ಇದೆ ಎಂಬುದನ್ನು ಸಂಸದರು ಹಲವಾರು ಬಾರಿ ಸಂಸತ್ತಿನ ಶೂನ್ಯ ವೇಳೆಯಲ್ಲಿ ಮಾತನಾಡಿದ್ದರು ಹಾಗೂ ಖುದ್ದು ಸಚಿವರನ್ನು ಭೇಟಿ ಮಾಡಿ ಒತ್ತಾಯ ಮಾಡುವ ಮೂಲಕ ಸಾಕಷ್ಟು ಒತ್ತಡ ಹೇರಿದ್ದರು. ಇದೀಗ ಸಂವಹನ ಸಚಿವಾಲಯದ ಸಚಿವರಾದ ಅಶ್ವಿನಿ ವೈಷ್ಣವ್ ರವರ ಸೂಚನೆ ಮೇರೆಗೆ ಚಿತ್ರದುರ್ಗ ಜಿಲ್ಲೆಯಿಂದ ದಾವಣಗೆರೆ ಜಿಲ್ಲೆಯನ್ನು ಬೇರ್ಪಡಿಸಿ ದಾವಣಗೆರೆಗೆ ಪ್ರತ್ಯೇಕ ಅಂಚೆ ಅಧೀಕ್ಷಕರ ವಿಭಾಗ ಕಛೇರಿಯನ್ನು ಹೊಸದಾಗಿ ರಚನೆ ಮಾಡಿದ್ದು, ಮಂಜೂರಾತಿ ಮಾಡಿ ಆದೇಶ ಹೊರಡಿಸಿದ್ದಾರೆ.

ಈ ಮೊದಲು ದಾವಣಗೆರೆ ಜಿಲ್ಲೆಯ ಚನ್ನಗಿರಿ ಹಾಗೂ ಹೊನ್ನಾಳಿ, ನ್ಯಾಮತಿ ತಾಲ್ಲೂಕುಗಳು ಶಿವಮೊಗ್ಗ ಅಂಚೆ ಅಧೀಕ್ಷಕರ ಕಛೇರಿ ವ್ಯಾಪ್ತಿಗೆ ಒಳಪಟ್ಟಿದ್ದವು. ಉಳಿದಂತೆ ದಾವಣಗೆರೆ, ಹರಿಹರ, ಜಗಳೂರು, ತಾಲ್ಲೂಕುಗಳು ಚಿತ್ರದುರ್ಗ ಅಂಚೆ ಅಧೀಕ್ಷಕರ ಕಛೇರಿ ವ್ಯಾಪ್ತಿಗೆ ಒಳಪಟ್ಟಿದ್ದವು. ಈಗ ದಾವಣಗೆರೆ ಜಿಲ್ಲೆಯ ಎಲ್ಲಾ ಆರು ತಾಲ್ಲೂಕುಗಳನ್ನು ಒಳಗೊಂಡು ದಾವಣಗೆರೆ ಅಂಚೆ ಅಧೀಕ್ಷಕರ ಕಛೇರಿಯನ್ನು ಹೊಸದಾಗಿ ರಚನೆ ಮಾಡಲಾಗಿದೆ. ಅಂಚೆ ಕಛೇರಿಯ ಕೆಲಸಗಳಿಗಾಗಿ ದಾವಣಗೆರೆ ಜಿಲ್ಲೆಯ ಸಾರ್ವಜನಿಕರು ಚಿತ್ರದುರ್ಗ ಹಾಗೂ ಶಿವಮೊಗ್ಗಕ್ಕೆ ಓಡಾಟ ಮಾಡುವುದು ಇನ್ನು ಮುಂದೆ ತಪ್ಪಲಿದೆ.

Vijayaprabha Mobile App free

ದಾವಣಗೆರೆ ಜಿಲ್ಲೆಗೆ ಹೊಸ ಅಂಚೆ ಅಧೀಕ್ಷಕ ವಿಭಾಗ ಕಛೇರಿ ರಚನೆ ಮಾಡಿಕೊಟ್ಟಂತಹ ಕೇಂದ್ರ ಸಚಿವರಾದ ಅಶ್ವಿನಿ ವೈಷ್ಣವ್‍ರವನ್ನು ಡಾ.ಜಿ.ಎಂ.ಸಿದ್ದೇಶ್ವರ ಅಭಿನಂದಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.