ಹೊಸಪೇಟೆ(ವಿಜಯನಗರ),ಆ.29: ವಿಜಯನಗರ ಜಿಲ್ಲೆಯಲ್ಲಿ ಸಾಮಾಜಿಕ ಭದ್ರತೆ ಯೋಜನೆ ಅಡಿಯಲ್ಲಿ ಪಿಂಚಣಿ ಪಡೆಯುವ ಫಲಾನುಭವಿಗಳು ಈವರೆಗೂ ಆಧಾರ್ ಕಾರ್ಡ್ ಅನ್ನು ನೀಡದೇ ಇರುವ ಮತ್ತು ಪೋಸ್ಟಲ್ ಆರ್ಡರ್(EMO)ಮೂಲಕ ಪಿಂಚಣಿ ಪಡೆಯುವ ಫಲಾನುಭವಿಗಳು ಸೆ.15ರೊಳಗಾಗಿ ಸಂಬಂಧಪಟ್ಟ ತಾಲೂಕು ಕಚೇರಿಗೆ ಭೇಟಿ ನೀಡಿ ಆಧಾರ್ ಕಾರ್ಡ್ ಹಾಗೂ ಪೋಸ್ಟಲ್ ಆರ್ಡರ್ (EMO) ಮೂಲಕ ಪಿಂಚಣಿ ಪಡೆಯುವ ಫಲಾನುಭವಿಗಳು ಬ್ಯಾಂಕ್ ಖಾತೆ ವಿವರಗಳನ್ನು ಸಲ್ಲಿಸಬೇಕು ಎಂದು ವಿಜಯನಗರದ ಅಪರ ಜಿಲ್ಲಾಧಿಕಾರಿ ಎನ್.ಮಹೇಶ್ಬಾಬು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಖಾತೆ ವಿವರಗಳನ್ನು ಸಲ್ಲಿಸದಿದ್ದಲ್ಲಿ ತಮ್ಮ ವೇತನವನ್ನು ಸ್ಥಗಿತಗೊಳಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಎನ್.ಮಹೇಶ್ಬಾಬು ಅವರು ತಿಳಿಸಿದ್ದಾರೆ.