ತುಮಕೂರು: ಇತ್ತೀಚಿನ ದಿನಗಳಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವ ವೈದ್ಯರಿಗೆ ಶಿಕ್ಷಣ ತುಂಬಾ ಅನಿವಾರ್ಯವಾಗಿದೆ. ವೈದ್ಯಕೀಯ ಕ್ಷೇತ್ರ ಪ್ರಪಂಚದ ಎಲ್ಲಾ ರಾಷ್ಟ್ರಗಳಲ್ಲಿಯೂ ಅತ್ಯಮೂಲ್ಯವಾಗಿರುತ್ತದೆ. ಅತ್ಯಧಿಕ ಗೌರವ ಇರುವ ವೃತ್ತಿ ಎಂದರೆ ಅದು ’ವೈದ್ಯ ವೃತ್ತಿ’ಯಾಗಿರುತ್ತದೆ. ಈ ಶ್ವೇತ ಸಮವಸ್ತ್ರ ವೈದ್ಯಕೀಯ ಲೋಕದ ಸಂಕೇತವಾಗಿದ್ದು, ವೈದ್ಯಕೀಯ ಕ್ಷೇತ್ರ ಪ್ರಪಂಚದ ಎಲ್ಲಾ ರಾಷ್ಟ್ರಗಳಲ್ಲಿಯೂ ಅತ್ಯಮೂಲ್ಯವಾಗಿರುತ್ತದೆ. ಅತ್ಯಧಿಕ ಗೌರವ ಇರುವ ವೃತ್ತಿ ಎಂದರೆ ಅದು ವೈದ್ಯ ವೃತ್ತಿಯಾಗಿರುತ್ತದೆ ಎಂದು ಶ್ರೀದೇವಿ ಚಾರಿಟಬಲ್ ಟ್ರಸ್ಟ್‌ನ ಅಧ್ಯಕ್ಷರಾದ ಡಾ.ಎಂ.ಆರ್. ಹುಲಿನಾಯ್ಕರ್‌ರವರು ತಿಳಿಸಿದರು.
ನಗರದ ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಆಸ್ಪತ್ರೆಯ ವತಿಯಿಂದ ಗುರುವಾರ ಬೆಳಿಗ್ಗೆ 11 ಗಂಟೆಗೆ ಶ್ರೀದೇವಿ ವೈದ್ಯಕೀಯ ಕಾಲೇಜಿನ ಆವರಣದಲ್ಲಿ ನೂತನವಾಗಿ ಪ್ರವೇಶ ಪಡೆದಿರುವ 2024-24ನೇ ಸಾಲಿನ ಪ್ರಥಮ ವರ್ಷದ ವೈದ್ಯಕೀಯ ವಿದ್ಯಾರ್ಥಿಗಳಿಗೆ ವೈದ್ಯ ವೃತ್ತಿಯ ಸಂಕೇತವಾಗಿರುವ ಬಿಳಿ ವರ್ಣದ ಸಮವಸ್ತ್ರ ಧಾರಣೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಮಾನವ ಸಂಪನ್ಮೂಲ ಮತ್ತು ಮಾಹಿತಿ ತಂತ್ರಜ್ಞಾನ ನಿರ್ದೇಶಕರಾದ ಎಂ.ಎಸ್.ಪಾಟೀಲ್‌ರವರು ಮಾತನಾಡುತ್ತಾ ಶ್ರಮ ಮತ್ತು ಕಲಿಕೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು. ಶ್ರೀದೇವಿ ಆಸ್ಪತ್ರೆಯಲ್ಲಿ ಸುಸಜ್ಜಿತ ಆಸ್ಪತ್ರೆಯ ಪ್ರಾಯೋಗಶಾಲೆಗಳು ಲಭ್ಯವಿದ್ದು, ಅದರ ಸದುಪಯೋಗವನ್ನು ಪಡೆದುಕೊಳ್ಳುಬೇಕು. ನಮ್ಮಲ್ಲಿ ಡಿಜಿಟಲ್ ಗ್ರಂಥ ಬಂಡಾರವಿದೆ. ವೈದ್ಯಕೀಯ ವಿದ್ಯಾರ್ಥಿಗಳು ತಮ್ಮ ಶಿಕ್ಷಣ ಅವಧಿಯಲ್ಲಿ ಸಮಯ ಪರಿಪಾಲನೆ, ಕಾರ್ಯತತ್ಪರತೆ ಮತ್ತು ಜನರ ನೋವಿಗೆ ಸ್ಪಂದಿಸುವ ಮನೋಭಾವನೆಯನ್ನು ಬೆಳೆಸಿಕೊಂಡು ಒಂದು ಉತ್ತಮ ಆರೋಗ್ಯಕರವಾದ ಸಮಾಜದ ಕಲ್ಪನೆಯನ್ನು ಸಾಕಾರಗೊಳಿಸಬಹುದು. ರಾಜೀವ್ ಗಾಂಧಿ ವಿಶ್ವವಿದ್ಯಾಲಯದ ಮಟ್ಟದಲ್ಲಿ ವಿದ್ಯಾರ್ಥಿಗಳು ಉತ್ತಮ ರ‍್ಯಾಂಕ್‌ಗಳನ್ನು ಪಡೆದಿರುತ್ತಾರೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಶ್ರೀದೇವಿ ಆಸ್ಪತ್ರೆಯ ನೇತ್ರತಜ್ಞರಾದ ಡಾ.ಲಾವಣ್ಯ, ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಎಂ.ಎಲ್.ಹರೇಂದ್ರಕುಮಾರ್, ಜೀವ ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ಟಿ.ಜೆ.ಸತೀಶ್, ಅಂಗರಚನಾಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ಸಿ.ಶಿವಲೀಲಾ, ಶರೀರಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ಅರತಿ ಹಾಗೂ ವಿವಿಧ ವಿಭಾಗಗಳ ಮುಖ್ಯಸ್ಥರು ಮತ್ತು ವಿದ್ಯಾರ್ಥಿಗಳು, ಬೋಧಕ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.