ಚನ್ನಗಿರಿ: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಂತಹ ಭ್ರಷ್ಟ ರಾಜಕಾರಣಿಗೆ ಬುದ್ದಿ ಕಲಿಸಬೇಕಾದರೆ ವಡ್ನಾಳ್ ರಾಜಣ್ಣ ಅವರಂತಹ ಸಜ್ಜನರನ್ನು ಶಾಸನ ಸಭೆಗೆ ಕಳುಹಿಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಪಟ್ಟಣದ ಶ್ರೀ ಶಿವಲಿಂಗೇಶ್ವರ ಸರಕಾರಿ ಪ್ರಥಮ ದರ್ಜೆ ಕಾಲೇಜು ಎದುರಿನ ಮೈದಾನದಲ್ಲಿ ತಾಲೂಕು ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದ ಪ್ರಜಾಧ್ವನಿ ಯಾತ್ರೆಯನ್ನು ಉದ್ಘಾಟಿಸಿ ಅವರು ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಚನ್ನಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡಲು ಹೆಚ್ಚು ಆಕಾಂಕ್ಷಿ ಗಳಿದ್ದು , ಮಾಜಿ ಶಾಸಕ ವಡ್ನಾಳ್ ರಾಜಣ್ಣ ಸ್ಪರ್ಧೆ ಮಾಡುವುದಾದರೆ ಅವರಿಗೆ ಪಕ್ಷದ ಟಿಕೆಟ್ ಕೊಡಿಸಲಾಗುವುದು ಎನ್ನುವ ಮೂಲಕ ಕಾರ್ಯಕರ್ತರಲ್ಲಿದ್ದ ಗೊಂದಲ ದೂರ ಮಾಡಿದರು.
ಇನ್ನು, ಬಿಜೆಪಿ ಶೇ. 40 ರಷ್ಟು ಕಮಿಷನ್ ಎಂದು ಹೇಳಿದಾಗ ಮುಖ್ಯಮಂತ್ರಿಯವರು ದಾಖಲೆ ಕೊಡಿ ಎಂದು ಎಂದಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿ ಕಾರಿದರು.