ಚನ್ನಗಿರಿ : ಶ್ರೀ ಶಿವಲಿಂಗೇಶ್ವರಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಸೇರ ಬಯಸುವ ವಿದ್ಯಾರ್ಥಿಗಳು ನೇರವಾಗಿ ಕಾಲೇಜಿಗೆ ಬಂದು ಆನ್‌ಲೈನ್ ಮೂಲಕ ಪ್ರವೇಶಾತಿ ಪಡೆಯುವ ಅವಕಾಶ ಕಲ್ಪಿಸಲಾಗಿದೆ ಎಂದು ಪ್ರಾಂಶುಪಾಲರಾದ ಪ್ರೊ.ಹಾಲಸಿದ್ದಪ್ಪ ಅವರು ತಿಳಿಸಿದ್ದಾರೆ.
ಹೌದು, ಕಾಲೇಜಿನ ಪ್ರವೇಶಾತಿಯು UUCMS ನಲ್ಲಿ ಜೂನ್ 11 ರಿಂದ ಪ್ರಾರಂಭಗೊಂಡಿದ್ದು ವಿದ್ಯಾರ್ಥಿಗಳು ನೇರವಾಗಿ ಪ್ರವೇಶ ಪಡೆಯಬಹುದಾಗಿದೆ.
ಕೋರ್ಸುಗಳ ವಿವರ:
ಬಿ.ಎ : ಪತ್ರಿಕೋದ್ಯಮ, ಸಮಾಜಶಾಸ್ತ್ರ, ಐಚ್ಛಿಕ ಕನ್ನಡ, ಐಚ್ಛಿಕ ಇಂಗ್ಲಿಶ್,ಇತಿಹಾಸ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ
ಬಿಎಸ್ಸಿ : ಕಂಪ್ಯೂಟರ್ ಸೈನ್ಸ್, ರಸಾಯನಶಾಸ್ತ್ರ, ಸಸ್ಯಶಾಸ್ತ್ರ, ಪ್ರಾಣಿ ಶಾಸ್ತ್ರ,ಭೌತಶಾಸ್ತ್ರ, ಗಣಿತ.
ಹಾಗೂ ಬಿ.ಕಾಂ ಮತ್ತು ಬಿಬಿಎ ವಿದ್ಯಾರ್ಥಿಗಳು ಈ ಮೇಲಿನ ಕೋರ್ಸುಗಳಿಗೆ ಪ್ರವೇಶಾತಿಯನ್ನು ಪಡೆಯಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.