ಹರಪನಹಳ್ಳಿ: ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರ ನಡುವೆ ಭಿನ್ನಾಭಿಪ್ರಾಯವಿದೆ ಎಂಬುದು ಕೇವಲ ವಿರೋಧಪಕ್ಷಗಳ ಸೃಷ್ಟಿʼ ಎಂದು ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಹೇಳಿದ್ದಾರೆ.
ಹೌದು, ವಿಜಯನಗರ ಜಿಲ್ಲೆಯ ಹರಪನಹಳ್ಳಿಯ ದೇವರ ತಿಮ್ಲಾಪುರದಲ್ಲಿ ಮಾತನಾಡಿದ ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರು, ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ʻರಾಜ್ಯದಲ್ಲಿ ಆಡಳಿತ ಪಕ್ಷದ ವಿರುದ್ಧ ಅಲೆಯಿದೆ. ಕಾಂಗ್ರೆಸ್‌ನಲ್ಲಿ ಗುಂಪುಗಾರಿಕೆ ಇದೆ ಎಂಬುದು ಸುಳ್ಳು. ವಿಧಾನಸಭಾ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್ ಕೊಟ್ಟರೂ ಒಗ್ಗಟ್ಟಿನಿಂದ ಪಕ್ಷದ ಅಭ್ಯರ್ಥಿ ಗೆಲ್ಲಿಸುತ್ತಾರೆ ಎನ್ನುವ ನಂಬಿಕೆ ಇದೆʼ ಎಂದು ಹೇಳಿದರು.