ದಾವಣಗೆರೆ: ವಿದ್ಯಾರ್ಥಿ ಉಚಿತ, ರಿಯಾಯಿತಿ ಬಸ್‍ಪಾಸ್ ಪಡೆಯಲು ಅರ್ಜಿ ಆಹ್ವಾನ

ದಾವಣಗೆರೆ ಜೂ.06 :ಪ್ರ ಸಕ್ತ ಸಾಲಿನಲ್ಲಿ ಕ.ರಾ.ರ.ಸಾ.ನಿಗಮದ ದಾವಣಗೆರೆ ವಿಭಾಗದಿಂದ ವಿದ್ಯಾರ್ಥಿ ಉಚಿತ/ರಿಯಾಯಿತಿ ಬಸ್‍ಪಾಸ್‍ಗಳನ್ನು ಸೇವಾಸಿಂಧು ಪೋರ್ಟಲ್ (ಆನ್‍ಲೈನ್)ನಲ್ಲಿ ವಿದ್ಯಾರ್ಥಿ ಪಾಸ್‍ಗಳನ್ನು ವಿತರಿಸಲು ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಗ್ರಾಮ…

ksrtc student bus pass vijayaprabha

ದಾವಣಗೆರೆ ಜೂ.06 :ಪ್ರ ಸಕ್ತ ಸಾಲಿನಲ್ಲಿ ಕ.ರಾ.ರ.ಸಾ.ನಿಗಮದ ದಾವಣಗೆರೆ ವಿಭಾಗದಿಂದ ವಿದ್ಯಾರ್ಥಿ ಉಚಿತ/ರಿಯಾಯಿತಿ ಬಸ್‍ಪಾಸ್‍ಗಳನ್ನು ಸೇವಾಸಿಂಧು ಪೋರ್ಟಲ್ (ಆನ್‍ಲೈನ್)ನಲ್ಲಿ ವಿದ್ಯಾರ್ಥಿ ಪಾಸ್‍ಗಳನ್ನು ವಿತರಿಸಲು ಅವಕಾಶ ಕಲ್ಪಿಸಲಾಗಿದೆ.

ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಗ್ರಾಮ ಒನ್ ಕೇಂದ್ರಗಳು ಕಾರ್ಯಾರಂಭ ಮಾಡಿದ್ದು, ವಿದ್ಯಾರ್ಥಿಗಳು ಗ್ರಾಮ ಒನ್ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್ ಮುಖಾಂತರ ಬಸ್‍ಪಾಸ್‍ಗೆ ಅರ್ಜಿ ಸಲ್ಲಿಸುವಾಗ ಸಂಬಂಧಪಟ್ಟ ದಾಖಲೆಗಳನ್ನು ಅಪ್‍ಲೋಡ್ ಮಾಡುವುದು ಕಡ್ಡಾಯವಾಗಿರುತ್ತದೆ. ಫಲಾನುಭವಿಗಳು ಆನ್‍ಲೈನ್ ಮುಖಾಂತರ ದಾಖಲಾತಿಗಳನ್ನು ಅಪ್‍ಲೋಡ್ ಮಾಡಿದ್ದಾಗ್ಯೂ, ಭೌತಿಕವಾಗಿ ಬಸ್‍ಪಾಸ್‍ಗಳನ್ನು ಪಡೆಯಲು ಬಂದಾಗ ಮೂಲ ದಾಖಲೆಗಳು ಹಾಗೂ ಜೆರಾಕ್ಸ್ ಪ್ರತಿಯನ್ನು ಹಾಜರುಪಡಿಸಿ ಕೆ.ಎಸ್.ಆರ್.ಟಿ.ಸಿ ಬಸ್‍ನಿಲ್ದಾಣದ ಪಾಸ್ ಕೌಂಟರ್‍ನಲ್ಲಿ ಪಾಸ್‍ಗಳನ್ನು ಪಡೆಯಬಹುದಾಗಿದೆ.

ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳು : ಸೇವಾಸಿಂಧು ಅರ್ಜಿ, ಖಾಯಂ ವಿಳಾಸ ದಾಖಲಾತಿ (ಆಧಾರ್), ಪ್ರವೇಶ ರಸೀದಿ, Non SATS ವಿದ್ಯಾರ್ಥಿಗಳು ಕಡ್ಡಾಯವಾಗಿ ವಿದ್ಯಾಸಂಸ್ಥೆಯ ಮುಖ್ಯಸ್ಥರಿಂದ ದೃಢೀಕರಣ ಪತ್ರ ಅಪ್‍ಲೋಡ್ ಮಾಡುವುದು, ವಿಳಾಸ ಬದಲಾವಣೆ ಇದ್ದಲ್ಲಿ ವಿದ್ಯಾರ್ಥಿಗಳ ಸ್ವಯಂ ದೃಢೀಕರಣ ಪತ್ರ ಅಪ್‍ಲೋಡ್ ಮಾಡುವುದು, ಪರಿಶಿಷ್ಟ ಜಾತಿ/ಪಂಗಡದ ವಿದ್ಯಾರ್ಥಿಗಳು ಕಡ್ಡಾಯವಾಗಿ ಜಾತಿ ಪ್ರಮಾಣಪತ್ರ ಅಪ್‍ಲೋಡ್ ಮಾಡಬೇಕಾಗಿ ಎಂದು ಕ.ರಾ.ರ.ಸಾ.ನಿಗಮ ದಾವಣಗೆರೆ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.