ಮಾಜಿ ಶಾಸಕ ಕೆ.ಮಲ್ಲಪ್ಪ ನಿಧನಕ್ಕೆ ಕುರುಬ ಸಮಾಜ ತೀವ್ರ ಸಂತಾಪ

ದಾವಣಗೆರೆ: ಕೆಲ ದಿನಗಳಿಂದ ಅನೊರೋಗ್ಯದಿಂದ ಬಳಲುತ್ತಿದ್ದ, ಸಮಾಜದ ಬಗ್ಗೆ ಅಪಾರ ಕಾಳಜಿ ಹೊಂದಿದ 2 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ, ಕುರುಬ ಸಮಾಜದ ಹಿರಿಯ ನಾಯಕ, ಮಾಜಿ ಶಾಸಕ ಕೆ.ಮಲ್ಲಪ್ಪ (92) ಅವರು ಇಂದು ನಿಧನರಾಗಿದ್ದು,…

k mallappa vijayaprabha

ದಾವಣಗೆರೆ: ಕೆಲ ದಿನಗಳಿಂದ ಅನೊರೋಗ್ಯದಿಂದ ಬಳಲುತ್ತಿದ್ದ, ಸಮಾಜದ ಬಗ್ಗೆ ಅಪಾರ ಕಾಳಜಿ ಹೊಂದಿದ 2 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ, ಕುರುಬ ಸಮಾಜದ ಹಿರಿಯ ನಾಯಕ, ಮಾಜಿ ಶಾಸಕ ಕೆ.ಮಲ್ಲಪ್ಪ (92) ಅವರು ಇಂದು ನಿಧನರಾಗಿದ್ದು, ಅವರ ಸಾವಿಗೆ ಕುರುಬ ಸಮಾಜ ತೀವ್ರ ಸಂತಾಪ ವ್ಯಕ್ತಪಡಿಸಿದೆ.

ಕೆ ಮಲ್ಲಪ್ಪ, ದಾವಣಗೆರೆ ನಗರದ ಆಂಜನೇಯ ಬಡಾವಣೆಯ ಸ್ವಗೃಹದಲ್ಲಿ ನಿಧನರಾಗಿದ್ದು, ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧುಬಳಗವನ್ನು ಬಿಟ್ಟು ಅಗಲಿರುವ ಮೃತರ ಅಂತ್ಯಕ್ರಿಯೆ ಸೋಮವಾರ ಸಂಜೆ ದಾವಣಗೆರೆ ಹಿಂದು ರುದ್ರಭೂಮಿಯಲ್ಲಿ ನೆರವೇರಲಿದೆ.

ಕೆ.ಮಲ್ಲಪ್ಪ ಅವರು ಜಿಲ್ಲೆಗೊಂದು ಮಠ ಸ್ಥಾಪನೆಯಾಗಬೇಕು. ಅದರ ಮೂಲಕ ಸಮಾಜವನ್ನು ಜಾಗೃತ ಗೊಳಿಸಬೇಕು ಎನ್ನುತ್ತಿದ್ದರು. ಆಹ್ವಾನ ನೀಡಿದ ಎಲ್ಲಾ ಕಾರ್ಯಕ್ರಮಕ್ಕೆ ಆ ವಯಸ್ಸಿನಲ್ಲಿ ಹಾಜರಿದ್ದು ಮಾರ್ಗದರ್ಶನ ನೀಡುತ್ತಿದ್ದರು. ರೊಟ್ಟಿ ಬುತ್ತಿ ಕಾರ ಮಂಡಕ್ಕಿ ತಿಂದು ರಾಜಕೀಯ ಮಾಡಿದವರು ನಾವು, ಕೇವಲ ಸಾವಿರ ರೂಪಾಯಿಗಳಲ್ಲಿ ನಗರಸಭೆ ವಿಧಾನ ಸಭೆ ಚುನಾವಣೆ ಗಳನ್ನು ಮಾಡುತ್ತಿದ್ದೆವು. ಆದರೆ ಈಗಿನ ಚುನಾವಣಾ ವ್ಯವಸ್ಥೆಯೇ ಬೇರೆಯಾಗಿದೆ ಎಂದು ಬೇಸರ ವ್ಯಕ್ತ ಪಡಿಸಿದ್ದರು.

Vijayaprabha Mobile App free

ಇತ್ತೀಚಿಗೆ ಅನೊರೋಗ್ಯದಿಂದ ಬಳಲುತ್ತಿದ್ದ ಮಾಜಿ ಶಾಸಕ ಕೆ.ಮಲ್ಲಪ್ಪ ಅವರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ಮಾಡಿದ್ದರು.

ಮಾಜಿ ಶಾಸಕ ಕೆ.ಮಲ್ಲಪ್ಪ ಅವರ ಸಾಧನೆ:

1956 ರಲ್ಲಿ ದಾವಣಗೆರೆ ಪುರಸಭೆ ಸದಸ್ಯರಾಗುವ ಮೂಲಕ ಸಾರ್ವಜನಿಕ ಜೀವನಕ್ಕೆ ಕಾಲಿಟ್ಟ ಮಲ್ಲಪ್ಪ ಅವರು ಮಾಯಕೊಂಡ ಮತ್ತು ಹರಿಹರ ವಿಧಾನಸಭಾ ಕ್ಷೇತ್ರಗಳಿಂದ ತಲಾ ಒಂದು ಬಾರಿ ಶಾಸಕರಾಗಿ, ವಿಧಾನ ಪರಿಷತ್ ಶಾಸಕರಾಗಿ ಸೇವೆ ಸಲ್ಲಿಸಿದ್ದಾರೆ.

ದೇವರಾಜ್ ಅರಸ್ ಹಿಂದುಳಿದ ವರ್ಗಗಳ ನಿಗಮ ಹಾಗೂ ಬಯಲು ಸೀಮೆಯ ಅಧ್ಯಕ್ಷರಾಗಿ ನಿರಂತರವಾಗಿ ಜನಸೇವೆಯಲ್ಲಿ ತೊಡಗಿದ್ದವರು

1980 ರಲ್ಲಿ 6 ಬಾರಿ ಸದಸ್ಯರಾಗಿದ್ದ ಬಸವರಾಜ್ ಹೊರಟ್ಟಿ ವಿರುದ್ಧ ಪಶ್ಚಿಮ ಶಿಕ್ಷಕರ ಕ್ಷೇತ್ರ ವಿಧಾನ ಪರಿಷತ್ತಿನ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.

ಕರ್ನಾಟಕ ಕುರುಬರ ಸಂಘದ ಅಧ್ಯಕ್ಷರಾಗಿದ್ದ ಕೆ.ಮಲ್ಲಪ್ಪ ಅವರು ಆ ಕಾಲದಲ್ಲಿ ಕುರುಬ ಜನಾಂಗವನ್ನು ಎಸ್ಟಿ ಪಟ್ಟಿಗೆ ಸೇರಿಸಬೇಕು ಎಂದು ಹೋರಾಟ ಮಾಡಿದ್ದರು. 60 ಮತ್ತು 70ರ ದಶಕದಲ್ಲಿ ರಾಜ್ಯಾದ್ಯಂತ ಪ್ರವಾಸ ಮಾಡಿ ಸಮಾಜವನ್ನು ಸಂಘಟಿಸಿ, ಶೈಕ್ಷಣಿಕವಾಗಿ ಸಬಲರನ್ನಾಗಿ ಮಾಡಿದ ಹೆಗ್ಗಳಿಕೆ ಅವರದು.

ಮಾಜಿ ಸಿಎಂ ಸಿದ್ದರಾಮಯ್ಯನವರ ಆಪ್ತರಾಗಿದ್ದ ಕೆ.ಮಲ್ಲಪ್ಪ ಅವರು ಅಹಿಂದಾ ಸಂಘಟನೆಯ ಪ್ರಮುಖ ರೂವಾರಿಗಳಲ್ಲಿ ಒಬ್ಬರಾಗಿದ್ದರು. ಅಷ್ಟೆ ಅಲ್ಲದೇ ಮಲ್ಲಪ್ಪನವರು ಕುಸ್ತಿ ಜೀರ್ಣೋದ್ಧಾರಕ ಸಂಘದ ಅಧ್ಯಕ್ಷರಾಗಿ ಹೆಸರುವಾಸಿಯಾಗಿದ್ದು, ನೂರಾರು ಕ್ರೀಡಾಪಟುಗಳನ್ನು ಬೆಳೆಸಿದ್ದರು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.