ದಾವಣಗೆರೆ: ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ ಮತ್ತು ಇತರೆ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ ಜೂ.06: ಮೀನುಗಾರಿಕೆ ಇಲಾಖೆ ವತಿಯಿಂದ ಜಿಲ್ಲಾ ಪಂಚಾಯತ್ ಯೋಜನೆಗಳಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳ ಜಮೀನಿನಲ್ಲಿ ಕನಿಷ್ಟ 2000 ಚ.ಮೀ ಮೀನು ಕೃಷಿ ಕೈಗೊಳ್ಳಲು ಕೊಳ ನಿರ್ಮಾಣಕ್ಕೆ ಸಹಾಯ/ಸಲಕರಣೆ ಕಿಟ್ಟು…

fish department vijayaprabha news

ದಾವಣಗೆರೆ ಜೂ.06: ಮೀನುಗಾರಿಕೆ ಇಲಾಖೆ ವತಿಯಿಂದ ಜಿಲ್ಲಾ ಪಂಚಾಯತ್ ಯೋಜನೆಗಳಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳ ಜಮೀನಿನಲ್ಲಿ ಕನಿಷ್ಟ 2000 ಚ.ಮೀ ಮೀನು ಕೃಷಿ ಕೈಗೊಳ್ಳಲು ಕೊಳ ನಿರ್ಮಾಣಕ್ಕೆ ಸಹಾಯ/ಸಲಕರಣೆ ಕಿಟ್ಟು ಹರಿಗೋಲು ವಿತರಣೆ, ಮೀನು ಮಾರಾಟ ಮತ್ತು ಮತ್ಸ್ಯವಾಹಿನಿಗೆ ಸಹಾಯ ಹಾಗೂ ರಾಜ್ಯವಲಯ ಯೋಜನೆಗಳಾದ ಮೀನುಗಾರಿಕೆ ಸಲಕರಣೆ ಕಿಟ್‍ಗೆ ಸಹಾಯ, ಫೈಬರ್ ಗ್ಲಾಸ್ ಹರಿಗೋಲು ವಿತರಣೆ, ಮೀನುಗಾರರ ಸಹಕಾರ ಸಂಘಗಳಿಗೆ ಹಾಗೂ ವೈಯಕ್ತಿಕ ಮೀನು ಕೃಷಿಕರಿಗೆ ಮೀನುಮರಿ ಖರೀದಿಗೆ ಸಹಾಯ ಯೋಜನೆಯಡಿ ಸಹಾಯ ಒದಗಿಸಲು ಸೇವಾ ಸಿಂಧುವಿನ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಹೊಸದಾಗಿ ಮೀನುಕೃಷಿ ಕೊಳ ನಿರ್ಮಾಣ ಮಾಡಲು ಇಚ್ಛಿಸುವವರು ಹಾಗೂ ಮಿನುಗಾರಿಕೆ ಸಂಬಂಧಿಸಿದ ಇತರೆ ಚಟುವಟಿಕೆಗಳಾದ ಆರ್.ಎ.ಎಸ್ ಘಟಕಗಳ ನಿರ್ಮಾಣ ತಾಜಾ ಮೀನು ಮಾರಾಟ ಕೇಂದ್ರಗಳ ಸ್ಥಾಪನೆ ಮೀನು ಸಾಗಣೆ ಮತ್ತು ಮಾರಾಟ ವಾಹನಗಳ ಖರೀದಿಗೆ ಸಹಾಯಧನ ಮತ್ತಿತರ ಚಟುವಟಿಕೆಗಳ ಸದುಪಯೋಗವನ್ನು ಪಡೆಯಲು ಅರ್ಜಿಗಳನ್ನು ಸಲ್ಲಿಸಲು ಜೂ.30 ರಂದು ಕೊನೆಯ ದಿನವಾಗಿದ್ದು, ಯೋಜನೆಗಳ ಸಹಾಯಧನ ಪಡೆಯಲು ಆಸಕ್ತ ಒಳನಾಡು ಮೀನುಗಾರರು ಸಂಬಂಧಪಟ್ಟ ತಾಲ್ಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗಳಿಗೆ ಸಂಪರ್ಕಿಸಿ ಅರ್ಜಿಗಳನ್ನು ಸಲ್ಲಿಸಬಹುದೆಂದು ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.