ತುಮಕೂರು: ಮನೆಯ ಬೀಗ ಮುರಿದು ಒಳನುಗ್ಗಿದ ಕಳ್ಳರು ಮನೆಯಲ್ಲಿದ್ದ ಸುಮಾರು 30 ಲಕ್ಷ ಮೌಲ್ಯದ ಚಿನ್ನಾಭರಣ ಕದ್ದು ಪರಾರಿಯಾಗಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡದಲ್ಲಿ ನಡೆದಿದೆ.
ಪಟ್ಟಣದ ನಿವಾಸಿ ವಿಶ್ವ ಮೋಹನ ಗುಪ್ತ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದ್ದು, ಚಿನ್ನಾಭರಣ, ನಗದು ಸೇರಿ ಸುಮಾರು 30 ಲಕ್ಷ ಮೌಲ್ಯದ ವಸ್ತುಗಳನ್ನು ಕಳ್ಳರು ದೋಚಿ ಪರಾರಿಯಾಗಿದ್ದಾರೆ.
ಸ್ಥಳಕ್ಕೆ ಪೊಲೀಸರು, ಬೆರಳಚ್ಚು ತಜ್ಞರು ಹಾಗೂ ಶ್ವಾನದಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.