ತುಮಕೂರು: ನಗರದ ಓಬಳಾಪುರ ಗೇಟ್ ಬಳಿ ಮಂಗಳವಾರ ಮುಂಜಾನೆ ಬೈಕ್ ಟ್ರಾಕ್ಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರನ್ನು ಮಧುಗಿರಿ ತಾಲ್ಲೂಕಿನ ಗುಡ್ಡೇನಹಳ್ಳಿ ಗ್ರಾಮದ ಮೊಹಮ್ಮದ್ ಆಸಿಫ್ (12), ಮುಮ್ತಾಜ್ (38) ಮತ್ತು ಶಕೀರ್ ಹುಸೇನ್ (48) ಎಂದು ಗುರುತಿಸಲಾಗಿದೆ.
ಅಪಘಾತದ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಮೃತದೇಹಗಳನ್ನು ಶವಾಗಾರಕ್ಕೆ ಸ್ಥಳಾಂತರಿಸಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.