ಚಿತ್ರದುರ್ಗದಲ್ಲಿ ಕಾರು ಪಲ್ಚಿ: ಒಂದೇ ಕುಟುಂಬದ ಮೂವರ ಸಾವು

ಚಿತ್ರದುರ್ಗ: ಜಿಲ್ಲೆಯಲ್ಲಿ ವೇಗವಾಗಿ ಬಂದ ಕಾರು ರಸ್ತೆ ಮೇಲೆ ಪಲ್ಟಿಯಾದ ಪರಿಣಾಮ ಇಬ್ಬರು ಬಾಲಕರು ಸೇರಿದಂತೆ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಬೆಳಿಗ್ಗೆ ಎನ್ಎಚ್-150 ಎ…

ಚಿತ್ರದುರ್ಗ: ಜಿಲ್ಲೆಯಲ್ಲಿ ವೇಗವಾಗಿ ಬಂದ ಕಾರು ರಸ್ತೆ ಮೇಲೆ ಪಲ್ಟಿಯಾದ ಪರಿಣಾಮ ಇಬ್ಬರು ಬಾಲಕರು ಸೇರಿದಂತೆ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಬೆಳಿಗ್ಗೆ ಎನ್ಎಚ್-150 ಎ ನಲ್ಲಿ ಸಂಭವಿಸಿದ ಅಪಘಾತವು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವೀಡಿಯೊದಲ್ಲಿ, ಕಾರು ಡಿವೈಡರ್ಗೆ ಡಿಕ್ಕಿ ಹೊಡೆದು ಕನಿಷ್ಠ 10 ಬಾರಿ ಪಲ್ಟಿಯಾಗಿದ್ದನ್ನು ಕಾಣಬಹುದು.

ಅತೀ ವೇಗವಾಗಿ ಕಾರು ಚಲಾಯಿಸಿದ ಪರಿಣಾಮ ಚಾಲಕ ನಿಯಂತ್ರಣ ಕಳೆದುಕೊಂಡು ಡಿವೈಡರ್ಗೆ ಡಿಕ್ಕಿ ಹೊಡೆದ ನಂತರ ಕಾರು ಕನಿಷ್ಠ 10 ಬಾರಿ ಪಲ್ಟಿಯಾಗಿದ್ದು, ಚಾಲನೆ ಮಾಡುತ್ತಿದ್ದ ಮೌಲಾ ಅಬ್ದುಲ್ (35) ಮತ್ತು ಅವರ ಇಬ್ಬರು ಪುತ್ರರು ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

Vijayaprabha Mobile App free

ಯಾದಗಿರಿ ಜಿಲ್ಲೆಯ ಮೂಲದ ಕುಟುಂಬವು ಬೆಂಗಳೂರಿನಿಂದ ತಮ್ಮ ಊರಿಗೆ ಪ್ರಯಾಣಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.